ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಪತ್ತೆಗೆ ಹೆಚ್ಚಿನ ಪರೀಕ್ಷೆ ನಡೆಸಿ: ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ

Last Updated 2 ಸೆಪ್ಟೆಂಬರ್ 2020, 8:07 IST
ಅಕ್ಷರ ಗಾತ್ರ

ದೇವನಹಳ್ಳಿ: ಕೊರೊನಾ ಸೋಂಕಿತರ ಪತ್ತೆಗಾಗಿ ಜಿಲ್ಲೆಯಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ನಡೆದ ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳ ಕುರಿತ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೋಂಕಿತರ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತವ್ಯಕ್ತಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕೊರೊನಾ ಪರೀಕ್ಷೆಗೆ ಒಳಪಡಿಸುವ ಮೂಲಕ ಹರಡುವಿಕೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮ
ಕೈಗೊಳ್ಳಬೇಕು.ಡಯಾಲಿಸಿಸ್ ಹಾಗೂ ಇನ್ನಿತರ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳುತ್ತಿರುವರಿಗೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗೆ ಸಂಬಂಧಿಸಿದ ಆಸ್ಪತ್ರೆಗಳಿಗೆ ದಾಖಲಿಸಿ ಶೀಘ್ರವಾಗಿ ಚಿಕಿತ್ಸೆ ನೀಡಲು ಕ್ರಮವಹಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ‘ಕೊರೊನಾ ಸೋಕಿತರಿಗಾಗಿಯೇ ಜಿಲ್ಲೆ ಸರ್ಕಾರಿ ಹಾಗೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲಾಗಿದೆ. 51ಗಂಟಲು ದ್ರವ ಮಾದರಿ ಸಂಗ್ರಹ ಕೇಂದ್ರಗಳು, 61 ಫೀವರ್ ಕ್ಲಿನಿಕ್‌ಗಳು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಹೋಮ್ ಐಸೋಲೇಷನ್ ಹಾಗೂ ಕ್ವಾರಂಟೈನ್ ಸೆಂಟರ್‌ಗಳಲ್ಲಿರುವ ಕೊರೊನಾ ಸೊಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ಸೋಂಕಿನಿಂದ ಮೃತರಾದವರ ದೇಹ ಸಾಗಿಸಲು ತಾಲ್ಲೂಕುವಾರು ಒಂದು ಆಂಬುಲೆನ್ಸ್‌ ಮೀಸಲಿಡಲಾಗಿದೆ’ ಎಂದು ಹೇಳಿದರು.

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳ ಚಿಕಿತ್ಸೆ, ಇತರೆ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೂ ಚಿಕಿತ್ಸೆಯಲ್ಲಿಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ ರೀತಿಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಹಾಗೂ ಔಷಧಿ ವಿತರಣೆಯಲ್ಲಿ ಕೊರತೆ ಉಂಟಾಗದಂತೆ ಎಚ್ಚರ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಧರ್ಮೇಂದ್ರ, ಉಪವಿಭಾಗಾಧಿಕಾರಿ ಅರುಳ್‌ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು,
ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT