ಸೋಮವಾರ, ಏಪ್ರಿಲ್ 19, 2021
32 °C

ರೈತರಿಗೆ ನೀಡುವ ಹಾಲಿನ ದರದಲ್ಲಿ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ಈ ಹಿಂದೆ ಸಚಿವಾಗಿದ್ದಾಗ ತಾಲ್ಲೂಕಿನಲ್ಲಿ 40 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಮಾಡಿರುವುದಾಗಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ತಾಲ್ಲೂಕಿನ ಹಾಲು ಉತ್ಪಾದಕರ ಸಂಘದ ಆವರಣದಲ್ಲಿ ವಿವಿಧ ಪಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದರು. ತಾಲ್ಲೂಕಿನಾದ್ಯಂತ ವಿವಿಧೆಡೆ ಕಾರ್ಖಾನೆ ತೆರೆದು ಸ್ಥಳೀಯರಿಗೆ ಉದ್ಯೋಗ ನೀಡಲಾಗಿದೆ. ಇದರಿಂದ ತಾಲ್ಲೂಕಿನ ಯುವಕರು ಉದ್ಯೋಗ ಅರಸಿ ಬೇರೆಡೆಗೆ ಹೋಗುವುದು ತಪ್ಪಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ, ತಾಲ್ಲೂಕಿನಲ್ಲಿ ಸುಮಾರು ಎಂಟು ಸಾವಿರ ಕುಟುಂಬಗಳು ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿದ್ದು 201 ಡೇರಿಗಳು ಕೆಲಸ ಮಾಡುತ್ತಿವೆ ಎಂದರು.

ದರದಲ್ಲಿ ಹೆಚ್ಚಳ: ಇದೇ ಸಂದರ್ಭದಲ್ಲಿ ಮಾತನಾಡಿದ ಡೇರಿ ಸದಸ್ಯ ಹುಲ್ಲೂರು ಮಂಜುನಾಥ್, ಫೆಬ್ರುವರಿ 1ರಿಂದ ರೈತರು ನೀಡುವ ಹಾಲಿಗೆ ಎರಡು ರೂಪಾಯಿ ಹೆಚ್ಚಿಸಲಾಗುವುದು ಎಂದರು. 

ಇದೇ ಸಂದರ್ಭದಲ್ಲಿ ಹಸು ಎತ್ತುವ ಯಂತ್ರಗಳನ್ನು ವಿವಿಧ ಡೇರಿಗಳಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೋಡಿಹಳ್ಳಿ ಸೊಣ್ಣಪ್ಪ, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಎಲ್ ಅಂಡ್ ಟಿ ಮಂಜುನಾಥ್, ಸದಸ್ಯರಾದ ಉಪ್ಪಾರಹಳ್ಳಿ ಮುನಿಯಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಮಂಜುನಾಥ್, ಮುಖಂಡರಾದ ಸಿ.ಬೈರೇಗೌಡ, ಗೋಪಾಲಗೌಡ, ಶೇಖರ್ ಗೌಡ,ವಕೀಲ ಮಂಜುನಾಥ್ ಹಾಗೂ ಡೇರಿ ವ್ಯವಸ್ಥಾಪಕ ಶಿವಾಜಿ ನಾಯಕ್,ವಿಸ್ತರಣಾಧಿಕಾರಿ ಶ್ರೀರಾಮ್ ಹಾಗೂ ಇತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು