ಚಂದಾಪುರ (ಆನೇಕಲ್): ತಾಲ್ಲೂಕಿನ ಇಂಡ್ಲವಾಡಿ ಗ್ರಾಮದ ಸೂರ್ಯ ಸಿಟಿ ನಾಲ್ಕನೇ ಹಂತದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತರ ರಾಷ್ಟ್ರೀಯ ಕ್ರೀಡಾಂಗಣ ಕಾಮಗಾರಿಗೆ ಮೇ 23ರಂದು ಭೂಮಿ ಪೂಜೆ ನಡೆಯಲಿದೆ. ಒಂದು ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಶಾಸಕ ಬಿ.ಶಿವಣ್ಣ ತಿಳಿಸಿದರು.

ತಾಲ್ಲೂಕಿನ ಚಂದಾಪುರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂತರ ರಾಷ್ಟ್ರೀಯ ಕ್ರೀಡಾಂಗಣದಿಂದಾಗಿ ತಾಲ್ಲೂಕು ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಆಗಲಿದೆ. ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿಯು ಐಟಿ ಕ್ಷೇತ್ರದಲ್ಲಿ ಖ್ಯಾತಿಯಾದಂತೆ ಅಂತರ ರಾಷ್ಟ್ರೀಯ ಕ್ರೀಡಾಂಗಣ ಕ್ರೀಡಾ ಕ್ಷೇತ್ರದಲ್ಲಿ ಖ್ಯಾತಿಯಾಗಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಉತ್ತಮ ವೇದಿಕೆಯಾಗಲಿದೆ. ಅಂತರ ರಾಷ್ಟ್ರೀಯ ಕ್ರೀಡಾಂಗಣ ತಾಲ್ಲೂಕಿನ ಅಸ್ಮಿತೆಯಾಗಲಿದೆ. ರಾಜ್ಯ ಕ್ರೀಡಾ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.

ಅಂತರ ರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗುತ್ತಿರುವುದರಿಂದ ಈ ಭಾಗದಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ. ಬನ್ನೇರುಘಟ್ಟ-ಜಿಗಣಿ- ಇಂಡ್ಲವಾಡಿ ಸೂರ್ಯ ಸಿಟಿ ನಾಲ್ಕನೇ ಹಂತದವರೆಗೂ ಮೆಟ್ರೊ ವಿಸ್ತರಣೆಯಾಗಲಿದೆ. ಈ ಭಾಗದಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ಅಂತರ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕ್ರಿಕೆಟ್ ಜೊತೆಗೆ 30 ಕ್ರೀಡೆಗಳ ಕ್ರೀಡಾ ಸಂಕೀರ್ಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಕ್ರೀಡಾಂಗಣ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗಿದೆ. ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಅವಶ್ಯ ಇರುವ ಮೂಲ ಸೌಲಭ್ಯ ಕಲ್ಪಿಸಲು ಪ್ರಥಮ ಆದ್ಯತೆ ನೀಡಲಾಗಿದೆ. ಭಾರತ್ ಮಾಲ ರಸ್ತೆ, ಎಸ್ಟಿಆರ್ಆರ್ ರಸ್ತೆ ಸೇರಿದಂತೆ ವಿವಿಧ ಸಂಪರ್ಕ ರಸ್ತೆಗಳು ಕ್ರೀಡಾಂಗಣಕ್ಕೆ ಸಂಪರ್ಕ ಕಲ್ಪಿಸಲಿವೆ ಎಂದರು.

ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಸೇರಿದಂತೆ ಕ್ರಿಕೆಟ್ ದಿಗ್ಗಜರು ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದರು.

ಬಡವರ ಪರವಾದ ಕಾಂಗ್ರೆಸ್ ಸರ್ಕಾರ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಡವರ ಪರವಾದ ಸರ್ಕಾರವಾಗಿದೆ. ವಸತಿ ರಹಿತರಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚು ಕಾರ್ಯಕ್ರಮ ರೂಪಿಸಲಾಗಿದೆ. ಮೇ 23ರಂದು ಕಾರ್ಯಕ್ರಮದಲ್ಲಿ ಲಾಟರಿ ಮೂಲಕ ನಾಲ್ಕು ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಬಮೂಲ್ ನಿರ್ದೇಶಕ ಆರ್.ಕೆ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್, ರಘುಪತಿ ರೆಡ್ಡಿ, ಬೊಮ್ಮಸಂದ್ರ ಲಿಂಗಣ್ಣ, ಮುಖಂಡರಾದ ಎನ್.ಎಸ್.ಪದ್ಮನಾಭ, ಬಳ್ಳೂರು ಮುನಿವೀರಪ್ಪ, ಗಟ್ಟಹಳ್ಳಿ ಸೀನಪ್ಪ, ಕೆಂಪಣ್ಣ, ರವಿ, ಶಂಕರ್ ರೆಡ್ಡಿ, ಸುಶೀಲಮ್ಮ, ಸ್ವಾತೇಗೌಡ, ಚಿನ್ನಪ್ಪ, ಬೆಸ್ತಮಾನಹಳ್ಳಿ ಯಲ್ಲಪ್ಪ, ಅರೇಹಳ್ಳಿ ಮಧು, ಮುರುಳಿ, ಗೋಪಾಲರೆಡ್ಡಿ, ಖರ್ಗೆ, ಪುಷ್ಪರಾಜು, ಅಭಿ, ಮನೋಹರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-15-504057639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.