ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ವಿಧಾನಸಭಾ ಚುನಾವಣೆ: 2,846 ಮಂದಿ ಮೇಲೆ ನಿಗಾ

Last Updated 8 ಮೇ 2018, 6:15 IST
ಅಕ್ಷರ ಗಾತ್ರ

ಮಂಗಳೂರು: ವಿಧಾನಸಭಾ ಚುನಾವಣೆ ಸಮಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2,846 ಮಂದಿ ಮೇಲೆ‌ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಪುಲ್‌ ಕುಮಾರ್ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ' ಅಪರಾಧ ಹಿನ್ನೆಲೆ ಹೊಂದಿರುವ 2,756 ಮಂದಿ ಮತ್ತು ಚುನಾವಣೆ ಸಮಯದಲ್ಲಿ ದುಷ್ಕೃತ್ಯ ಎಸಗಬಹುದಾದ 90 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ' ಎಂದರು.

ಈವರೆಗೆ ಮುಂಜಾಗ್ರತಾ ಕ್ರಮವಾಗಿ 756 ಪ್ರಕರಣ ದಾಖಲಿಸಿ, ಭದ್ರತಾ ಬಾಂಡ್‌ ಪಡೆಯಲಾಗಿದೆ. ಆರು ರೌಡಿಗಳನ್ನು ಗಡಿಪಾರು ಮಾಡಿದ್ದು, ನಾಲ್ವರ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಕಮಿಷನರೇಟ್ ವ್ಯಾಪ್ತಿಯಲ್ಲಿ 877 ಮತಗಟ್ಟೆಗಳಿವೆ. ಈ ಪೈಕಿ 201 ಕ್ಲಿಷ್ಟಕರ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ಚುನಾವಣಾ ಭದ್ರತೆಗಾಗಿ 2,700 ಪೊಲೀಸರು, ಅರೆ ಸೇನಾಪಡೆಯ 11 ಕಂಪನಿಗಳು, ರಾಜ್ಯ ಮೀಸಲು ಪೊಲೀಸ್ ಪಡೆಯ ಆರು ಮತ್ತು ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಎಂಟು ತುಕಡಿಗಳನ್ನು ನಿಯೋಜಿಸಲಾಗಿದೆ. ಎರಡು ವಿಶೇಷ ಸಶಸ್ತ್ರ ತಂಡಗಳನ್ನು ಒದಗಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT