ಸೋಮವಾರ, ಸೆಪ್ಟೆಂಬರ್ 27, 2021
23 °C
ವಾಹನ ಸಂಚಾರಕ್ಕೆ ತೊಂದರೆ: ನಾಗರಿಕರ ಆಕ್ರೋಶ

ಪೆಟ್ಟಿಗೆ ಅಂಗಡಿ ತೆರವಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಪಟ್ಟಣದಲ್ಲಿ ಜನಸಂಖ್ಯೆ ಹಾಗೂ ವಾಹನ ಸಂಚಾರ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಅಂಗಡಿಗಳನ್ನು ತೆರವುಗೊಳಿಸಿದ್ದರೂ ನಾಡ ಕಚೇರಿ ಮುಂಭಾಗದ ರಸ್ತೆಯ ಪಕ್ಕದಲ್ಲಿ ರಾತ್ರೋರಾತ್ರಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಯೊಂದನ್ನು ತಂದು ಇಟ್ಟಿದ್ದಾರೆ. ಪುರಸಭೆ ಅಧಿಕಾರಿಗಳು ಕೂಡಲೇ ಅಂಗಡಿಯನ್ನು ತೆರವುಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ರಸ್ತೆ ಪಕ್ಕದಲ್ಲಿ ಈ ರೀತಿಯಾಗಿ ಅಂಗಡಿಗಳು ತಲೆ ಎತ್ತಿದರೆ ವಾಹನ ಸಂಚಾರಕ್ಕಾಗಿ ತೀವ್ರ ಅಡಚಣೆಯಾಗಿ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇದೆ. ನಾಡ ಕಚೇರಿಗೆ ಬರುವ ಸಾರ್ವಜನಿಕರೂ ಸೇರಿದಂತೆ ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೂ ತೊಂದರೆಯಾಗಲಿದೆ ಎಂದು ದೂರಿದ್ದಾರೆ.

ಈ ಮೊದಲು ರಸ್ತೆಯ ಇಕ್ಕೆಲಗಳಲ್ಲಿ ತರಕಾರಿ ಅಂಗಡಿಗಳು ಹೆಚ್ಚಾಗಿದ್ದ ಕಾರಣ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿತ್ತು. ಈ ಕಾರಣದಿಂದಾಗಿ ಪುರಸಭೆ ಹಾಗೂ ಪೊಲೀಸ್ ಇಲಾಖೆಯವರು ಜೊತೆಗೂಡಿ ರಸ್ತೆ ಪಕ್ಕದಲ್ಲಿದ್ದ ಅಂಗಡಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

ಲಾಕ್‌ಡೌನ್ ಮುಗಿದು ಅನ್‌ಲಾಕ್ ಆದ ನಂತರ ಪುನಃ ಒಬ್ಬೊಬ್ಬರೇ ಅಂಗಡಿಗಳನ್ನು ತಂದು ಅನಧಿಕೃತವಾಗಿ ರಸ್ತೆಬದಿಗಳಲ್ಲಿ ಇಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು. ಇಲ್ಲವಾದರೆ ನಾವು ಅಧಿಕಾರಿಗಳ ನಿರ್ಲಕ್ಷ್ಯ ಭಾವನೆಯ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಸ್ಥಳೀಯ ನಿವಾಸಿ ಸೋಮಶೇಖರ್ ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.