ಶುಕ್ರವಾರ, ಸೆಪ್ಟೆಂಬರ್ 24, 2021
21 °C

ನಿರ್ವಾಹಕರ ಅಮಾನತು ರದ್ದತಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿಬಿಎಂಟಿಸಿ ಬಸ್‌ನಲ್ಲಿ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪಾನಮತ್ತ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಲು ಎಳೆದಾಡಿರುವ ವಿಡಿಯೊ ಆಧರಿಸಿ ಪ್ರಸಾರವಾಗಿರುವ ಸುದ್ದಿಯ ಮೇರೆಗೆ ಮೂವರು ನಿರ್ವಾಹಕರನ್ನು ಅಮಾನತುಪಡಿಸಿರುವ ಇಲಾಖೆಯ ಅಧಿಕಾರಿಗಳ ಕ್ರಮ ಖಂಡನೀಯ ಎಂದು ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಗಜೇಂದ್ರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸಿನಲ್ಲಿ ಮಹಿಳೆಯರಿಗೆ ಮೀಸಲಿಟ್ಟಿದ್ದ ಆಸನದಲ್ಲಿ ಕುಳಿತಿದ್ದ ಪಾನಮತ್ತ ವ್ಯಕ್ತಿಯನ್ನು ಸೀಟು ಬಿಟ್ಟು ಬೇರೆ ಕಡೆಗೆ ಹೋಗುವಂತೆ ತಿಳಿಸಿದಾಗ ನಿರ್ವಾಹಕರನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ನಿರ್ವಾಹಕರ ಕೈಯಲ್ಲಿದ್ದ ಟಿಕೆಟ್ ಹಂಚಿಕೆ ಯಂತ್ರವನ್ನು ನೆಲಕ್ಕೆ ಎಸೆದು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ’ ಎಂದರು.

ರಂಪಾಟ ಸೃಷ್ಟಿಸಿದ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲು ಆತನನ್ನು ಬಸ್ ಕಡೆಗೆ ಎಳೆದಾಡುವಾಗ ಪ್ರಯಾಣಿಕನ ಮೇಲೆ ಹಲ್ಲೆ ಎಂದು ಬಿಂಬಿಸಲಾಗಿದೆ. ಈ ಸುದ್ದಿ ಆಧರಿಸಿ ಮೂವರನ್ನು ಸೇವೆಯಿಂದ ಅಮಾನತುಗೊಳಿಸಿರುವುದು ಖಂಡನೀಯ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿರ್ವಾಹಕರನ್ನು ಕರ್ತವ್ಯಕ್ಕೆ ಮರು ನೇಮಕ ಮಾಡಬೇಕು. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.