ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾವಾಣಿ’ ವರದಿ ಫಲಶೃತಿ ‌| ವಿಜಯಪುರದಲ್ಲಿ ಸಿ.ಸಿ.ಕ್ಯಾಮೆರಾ ಅಳವಡಿಕೆ

Published 18 ಮಾರ್ಚ್ 2024, 2:32 IST
Last Updated 18 ಮಾರ್ಚ್ 2024, 2:32 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಪಟ್ಟಣದ ಬಸ್ ನಿಲ್ದಾಣ, ಪುರಸಭೆ ಸರ್ಕಲ್, ಗಾಂಧಿಚೌಕ, ರಹಮತ್ ನಗರ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಪುರಸಭೆಯಿಂದ ಸಿ.ಸಿ.ಕ್ಯಾಮೆರಾ ಅಳವಡಿಸಲಾಗುತ್ತಿದೆ.

ಪಟ್ಟಣದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಪ್ರಮುಖ ವೃತ್ತಗಳಲ್ಲಿ ಸಿ.ಸಿ.ಕ್ಯಾಮೆರಾ ಅಳವಡಿಸಬೇಕು ಎಂದು ಹಲವಾರು ಸಭೆಗಳಲ್ಲಿ ಪ್ರಸ್ತಾಪ ಮಾಡಿದ್ದರೂ ಪುರಸಭೆಯವರಾಗಲಿ, ಪೊಲೀಸ್ ಇಲಾಖೆಯವರಾಗಲಿ ಗಮನಹರಿಸುತ್ತಿಲ್ಲವೆಂದು ‘ವಿಜಯಪುರ ಪ್ರಮುಖ ವೃತ್ತಗಳಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆಗೆ ಆಗ್ರಹ’ ಎಂಬ ಶೀರ್ಷಿಕೆಯಡಿ ಫೆ.10 ರಂದು ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟಗೊಂಡಿತ್ತು.

ಪಟ್ಟಣದಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದ್ದು, ಹೊರರಾಜ್ಯಗಳಿಂದ ಬಂದು ಹೋಗುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಅವರ ಚಲನವಲನಗಳ ಮೇಲೆ ನಿಗಾ ಇಡುವುದು, ಅಪರಾಧ ಪ್ರಕರಣಗಳಿಗೆ ಕಡಿವಾಣ, ರಾತ್ರಿಯ ವೇಳೆ ಬಸ್‌ ನಿಲ್ದಾಣದಲ್ಲಿ ಇಳಿದು ಮನೆಗಳಿಗೆ ಹೋಗುವ ನಾಗರಿಕರು ಅನುಭವಿಸುತ್ತಿದ್ದ ಸಮಸ್ಯೆ ಕುರಿತು ಪ್ರಜಾವಾಣಿ ವರದಿ ಪ್ರಕಟವಾಗಿತ್ತು. ಸಾಮಾನ್ಯ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಸಿ.ಸಿ.ಕ್ಯಾಮೆರಾ ಅಳವಡಿಕೆ ಮಾಡಲು ಅನುದಾನ ನಿಗದಿಪಡಿಸಿ, ಅಳವಡಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ತಿಳಿಸಿದರು.

ಪ್ರಮುಖ ವೃತ್ತಗಳ ಮಾಹಿತಿಯನ್ನು ಪುರಸಭೆಯಲ್ಲೆ ವೀಕ್ಷಣೆ ಮಾಡುವಂತಹ ವ್ಯವಸ್ಥೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡೆಗಳಲ್ಲಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT