ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀವ್ರಗೊಂಡ ಹೋರಾಟ: ಸಂಘಟನೆಗಳ ಬೆಂಬಲ

ವಿದೇಶಗಳಿಂದ ಬರುವವರಿಗೆ ತಾಲ್ಲೂಕಿನಲ್ಲಿ ಕ್ವಾರಂಟೈನ್: ಸರ್ಕಾರದ ನಿರ್ಧಾರಕ್ಕೆ ಆಕ್ರೋಶ
Last Updated 5 ಮೇ 2020, 17:28 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಹಿಂತಿರುಗುತ್ತಿರುವ ವಿವಿಧ ಜಿಲ್ಲೆಯ ಜನರನ್ನು ಕ್ವಾರಂಟೈನ್‍ಗೆ ಒಳಪಡಿಸಲು ತಾಲ್ಲೂಕಿನ ಕಲ್ಯಾಣ ಮಂಟಪಗಳು, ಸರ್ಕಾರಿ ಭವನ, ವಿದ್ಯಾರ್ಥಿ ನಿಲಯಗಳು, ವಸತಿ ಶಾಲಾ ಕಟ್ಟಡ ಬಳಸಿಕೊಳ್ಳುವ ಸರ್ಕಾರದ ಕ್ರಮ ವಿರೋಧಿಸಿ ಹಾಗೂ ಕೆಂಪು ವಲಯದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ದೊಡ್ಡಬಳ್ಳಾಪುರ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕು ಕಚೇರಿಗೆ ತೆರೆಳುವ ಮುನ್ನ ಕನ್ನಡ ಜಾಗೃತ ಭವನದಲ್ಲಿ ಸಭೆ ನಡೆಸಿದ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗ ಮುಖಂಡರು, ಕ್ವಾರಂಟೈನ್ ಆರಂಭಿಸಿರುವ ಸರ್ಕಾರದ ನಿರ್ಧಾರ ವಿರೋಧಿಸಿದರು. ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷಗಳ, ಸಂಘಟನೆಗಳನ್ನು ಒಳಗೊಂಡಿರುವ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ತಮ್ಮ ವಿರೋಧ ವ್ಯಕ್ತಪಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

ಪೊಲೀಸರೊಂದಿಗೆ ಮಾತಿನ ಚಕಮುಕಿ

ಸಭೆ ನಂತರ ತಾಲ್ಲೂಕು ಕಚೇರಿಗೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಇರುವುದರಿಂದ ಗುಂಪು ಸೇರದಂತೆ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನೆಡೆಯಿತು.

‘ವಿದೇಶಗಳಿಂದ ಬರುವ ಜನರನ್ನು ತಾಲ್ಲೂಕಿನಲ್ಲಿ ಕ್ವಾರಂಟೈನ್ ಮಾಡುವ ಸರ್ಕಾರದ ನಿರ್ಧಾರ ಕೈಬಿಡಬೇಕು ಹಾಗೂ ಜಿಲ್ಲೆಯನ್ನು ಕೆಂಪು ವಲಯದಿಂದ ಬದಲಾಯಿಸುವಂತೆ ನಮ್ಮ ಒತ್ತಾಯವಾಗಿದ್ದು, ಶಾಂತಿ ಕದಡುವ ಉದ್ದೇಶ ನಮಗಿಲ್ಲ’ ಎಂದು ಮುಖಂಡರು ಸಮಜಾಯಿಷಿ ನೀಡಿದರು.

ನಗರ ಪೊಲೀಸ್ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಸೋಮಶೇಖರ್, ಈ ವೇಳೆ ಗುಂಪುಗೂಡಿ ಬರುವುದು ಕಾನೂನು ಬಾಹಿರ. ನಿಮ್ಮ ಅಭಿಪ್ರಾಯಗಳನ್ನು ಕಾನೂನು ಅಡಿಯಲ್ಲಿ ತಿಳಿಸಿ ಎಂದರು.

ರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯಕಾರ್ಯದರ್ಶಿ ರಾಜಘಟ್ಟ ರವಿ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್, ಬಿಜೆಪಿ ಹಿರಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ, ಕನ್ನಡ ಪಕ್ಷದ ತಾಲ್ಲೂಕು ಅಧ್ಯಕ್ಷ ಸಂಜೀವ್‌ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ರಾಜರಾಜೇಶ್ವರಿ ಯುವಕ ಸಂಘದ ಅಧ್ಯಕ್ಷ ಆರ್.ಕೆಂಪರಾಜ್, ಪತ್ರಕರ್ತ ದೇವರಾಜ್ ಸೇರಿದಂತೆ ವಿವಿಧ ರಾಜಕೀಯ ಹಾಗೂ ಸಂಘಟನೆಗಳ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT