ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಧಾನ್ಯ ಸಂಸ್ಕರಣೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Last Updated 8 ಸೆಪ್ಟೆಂಬರ್ 2019, 13:58 IST
ಅಕ್ಷರ ಗಾತ್ರ

ದೇವನಹಳ್ಳಿ: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯಗಳ ಸಂಸ್ಕರಣೆಗೆ ಪ್ರೋತ್ಸಾಹಧನ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಂದ ಹಾಗೂ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಕ್ಷೇತ್ರದಲ್ಲಿ ಸಂಸ್ಕರಣೆಯೇ ಅತಿ ಹೆಚ್ಚು ಸಮಸ್ಯಾತ್ಮಕವಾಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆದ ಸಿರಿಧಾನ್ಯಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ಸಿರಿಧಾನ್ಯ ಪೋಲಾಗುವುದನ್ನು ತಡೆಯಲು ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರ್ಯಾಂಡಿಂಗ್ ಘಟಕಗಳಿಗೆ‘ಸಿರಿಧಾನ್ಯಗಳ ಸಂಸ್ಕರಣೆಗೆ ಪ್ರೋತ್ಸಾಹಧನ’ ಯೋಜನೆಯಡಿ ಪ್ರೋತ್ಸಾಹಧನ ನೀಡುವುದು ಇದರ ಉದ್ದೇಶ.

ಸಿರಿಧಾನ್ಯಗಳ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪನೆಗಾಗಿ ಪ್ರೋತ್ಸಾಹ ಪಡೆಯಲು ಸಿರಿಧಾನ್ಯ ಬೆಳೆಯುವ ಅರ್ಹ ರೈತರು, ನವೋದ್ಯಮಿಗಳು, ರೈತ ಸಂಘಗಳು, ನೋಂದಾಯಿತ ಸ್ವ-ಸಹಾಯ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು, ಖಾಸಗಿ ಉದ್ದಿಮೆದಾರರು, ಸಾರ್ವಜನಿಕ ವಲಯ ಘಟಕಗಳು, ಜಂಟಿವಲಯ ಘಟಕಗಳು ಮತ್ತು ಆಹಾರ ಘಟಕಗಳ ಸ್ಥಾಪನೆ ಅಥವಾ ವಿಸ್ತರಣೆ ಅಥವಾ ಆಧುನೀಕರಣ ಉದ್ದಿಮೆಯಲ್ಲಿ ಕಾರ್ಯನಿರತರ ಪ್ರತಿ ಘಟಕಕ್ಕೆ ಶೇ 50ರಷ್ಟು ಸಹಾಯಧನವನ್ನು ಗರಿಷ್ಠ ₹ 10 ಲಕ್ಷದಂತೆ ಎರಡು ಕಂತುಗಳಲ್ಲಿ ಪಾವತಿಸಲಾಗುವುದು.

ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ ಮಾರ್ಕ್ ಹೊಂದಿರುವ ಹಾಗೂ ಏಪ್ರಿಲ್ 1ರ ನಂತರ ಖರೀದಿಸಿ ಅಳವಡಿಸಿರುವ ಯಂತ್ರೋಪಕರಣಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಇದು ಪ್ರಸ್ತಾವನೆ ಆಧಾರಿತ ಕಾರ್ಯಕ್ರಮವಾಗಿದ್ದು, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಮೂಲಕ ಅನುಷ್ಠಾನಗೊಳ್ಳುವ, ಮೊದಲು ಸಲ್ಲಿಕೆಯಾಗುವ ಅರ್ಹ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುವುದು.

ಮಾಹಿತಿಗಾಗಿ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ರೈತ ಸಹಾಯವಾಣಿ 1800 4253553 ಅನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT