ಶುಕ್ರವಾರ, ಆಗಸ್ಟ್ 12, 2022
21 °C

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

http://serviceonline.gov.in/karnataka ಮೂಲಕ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ‌ ದಿನ. ಮಂಡಳಿಯಲ್ಲಿ ನೋಂದಣಿಯಾಗಿರುವ ಕುರಿತು ದಾಖಲೆ (ಸ್ಮಾರ್ಟ್‌ಕಾರ್ಡ್ ಅಥವಾ ಗುರುತಿನ ಚೀಟಿಯ ದೃಢೀಕೃತ ಪ್ರತಿ), ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ ಮತ್ತು ವ್ಯಾಸಂಗ ಪ್ರಮಾಣ ಪತ್ರ ಸಲ್ಲಿಸಬೇಕು.

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಮಗುವಿನ ತಂದೆ ಅಥವಾ ತಾಯಿ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದು, ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ನೋಂದಣಿ ಚಾಲ್ತಿಯಲ್ಲಿ ಇರಬೇಕು.

ಹೆಚ್ಚಿನ ಮಾಹಿತಿಗೆ ಕಾರ್ಮಿಕ ‌ಸಹಾಯವಾಣಿ:155214(24/7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ‌ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು,‌‌ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು