ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Last Updated 21 ಏಪ್ರಿಲ್ 2022, 6:17 IST
ಅಕ್ಷರ ಗಾತ್ರ

ಕುಂದಾಣ (ದೇವನಹಳ್ಳಿ ತಾಲ್ಲೂಕು): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರದಲ್ಲಿರುವ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಯಲ್ಲಿ 6ರಿಂದ 10ನೇ ತರಗತಿಗೆ (ಆಂಗ್ಲ ಮಾಧ್ಯಮ) ಪ್ರವೇಶ ಪಡೆಯಲು ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ 75ರಷ್ಟು ಮತ್ತು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸ್ಥಾನ ಮೀಸಲಿಡಲಾಗಿದೆ.

ಪ್ರವೇಶ ಉಚಿತವಾಗಿದ್ದು, ದಾಖಲಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ, ಲೇಖನ ಸಾಮಗ್ರಿ, ಗ್ರಂಥಾಲಯ, ಕಂಪ್ಯೂಟರ್ ಸೌಲಭ್ಯ ಒದಗಿಸಲಾಗುತ್ತದೆ.

ಶಾಲಾ ದಾಖಲಾತಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಅರ್ಜಿ ಪಡೆದು, ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ನಕಲು ಪ್ರತಿ, ವಿದ್ಯಾರ್ಥಿಯ ಫೋಟೊ, ರೇಷನ್ ಕಾರ್ಡ್ ಇತ್ಯಾದಿ ಲಗತ್ತಿಸಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಜೂನ್ 30ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರದಲ್ಲಿರುವ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಯ ಮುಖ್ಯೋಪಾಧ್ಯಾಯರು, ಮೊಬೈಲ್‌ 87469 93589, 97397 06158, 79754 01469, 7090 217192 ಅಥವಾ ನೆಲಮಂಗಲ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ. 080-27627444, ಮೊಬೈಲ್‌ 99868 74875 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT