ಸಹಾಯಧನಕ್ಕೆ ಅರ್ಜಿ ಆಹ್ವಾನ
ಸೂಲಿಬೆಲೆ: 2020-21ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (ಪಿಎಂಕೆಎಸ್‌ವೈ) ಸೂಕ್ಷ್ಮ ಹನಿ ನೀರಾವರಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರೈತರು ಈ ಯೋಜನೆಯಡಿ ಹೆಸರು ನೋಂದಣಿಗೆ ಹೊಸಕೋಟೆ ತಾಲ್ಲೂಕು ತೋಟಗಾರಿಕೆ ಇಲಾಖೆಯ ಕಚೇರಿ ಸಂಪರ್ಕಿಸಬೇಕು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರಶಾಂತ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳೆಗಳಿಗೆ ನಿಗದಿಪಡಿಸಿರುವ ಅಂದಾಜು ವೆಚ್ಚದ (ಎಕರೆಗೆ) ಶೇಕಡ 90ರಷ್ಟು ಸಹಾಯಧನ ಪಡೆಯಬಹದು. ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಪ್ರತಿ ಕುಟುಂಬಕ್ಕೆ ಗರಿಷ್ಠ 5 ಎಕರೆಗೆ, ಬಾಳೆ ಮತ್ತು ಇತರೆ ಬಹುವಾರ್ಷಿಕ ಬೆಳೆಗಳಿಗೆ ಗರಿಷ್ಠ 12 ಎಕರೆಗೆ (ಮೊದಲ 5 ಎಕರೆಗೆ ಶೇಕಡ 90ರಷ್ಟು, ನಂತರ ಪ್ರತಿ ಎಕರೆಗೆ ಶೇಕಡ 45ರಷ್ಟು) ಸಹಾಯಧನ ಸಿಗಲಿದೆ. ಯೋಜನೆಯಡಿ ಸೌಲಭ್ಯ ಪಡೆಯದಿರುವ ರೈತರು ಮಾತ್ರ ಸಹಾಯಧನ ಪಡೆಯಲು ಅರ್ಹರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಹೆಚ್ಚಿನ ಅನುದಾನ ಲಭ್ಯವಿದೆ. ರೈತರು ಹೆಚ್ಚಿನ ಮಾಹಿತಿ ತೋಟಗಾರಿಕೆ ಕಚೇರಿ ಅಥವಾ ಮೊಬೈಲ್ 9483478162, 9538953949 ಸಂಪರ್ಕಿಸಬಹುದು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.