ಶನಿವಾರ, ಮೇ 28, 2022
30 °C

ಶಿಬಿರಾರ್ಥಿಗಳಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೂಲಿಬೆಲೆ: ಹೋಬಳಿಯ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಬ್ಯೂಟಿಕ್ ತರಬೇತಿ ಪಡೆದ ಮಹಿಳಾ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. 

‘ಕೆನರಾ ಬ್ಯಾಂಕ್ ತರಬೇತಿ ಸಂಸ್ಥೆಯು ಮಹಿಳೆಯರಿಗೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಪೂರಕವಾದ ಸ್ವಉದ್ಯೋಗ ತರಬೇತಿ ಶಿಬಿರಗಳನ್ನು ನಡೆಸುತ್ತಿದೆ. ತರಬೇತಿ ಪಡೆದವರು ಸ್ವಂತ ಉದ್ದಿಮೆ  ಕಟ್ಟಿಕೊಳ್ಳಲು ಮುಂದಾಗಬೇಕು’ ಎಂದು ಸಮಾಜ ಸೇವಕಿ ಪ್ರತಿಭಾ ಶರತ್ ಬಚ್ಚೇಗೌಡ ಸಲಹೆ ನೀಡಿದರು. 

ಸಂಸ್ಥೆಯ ನಿರ್ದೇಶಕ ಗಿರಿಯಪ್ಪ ಮಾತನಾಡಿ, ಸಂಸ್ಥೆ ಪ್ರಾರಂಭದಿಂದ ಇಂದಿನವರೆಗೆ 25 ಸಾವಿರ ಶಿಬಿರಾರ್ಥಿಗಳಿಗೆ ವಿವಿಧ ವಲಯಗಳಲ್ಲಿ ತರಬೇತಿ ನೀಡಲಾಗಿದೆ. ಯುವಕರು, ಯುವತಿಯರಿಗೆ ತರಬೇತಿ ನೀಡಲಾಗುತ್ತಿದ್ದು, ವೃತ್ತಿಯಲ್ಲಿ ತೊಡಗಿಸಿಕೊಂಡು ಸ್ವಉದ್ಯೋಗಿಗಳಾಗಬೇಕು ಎಂದರು. ಸಂಸ್ಥೆಯ ಸುಗುಣ, ನಾಗೇಶ್, ನಾಗರಾಜ್ ಇದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.