ಸೋಮವಾರ, ಅಕ್ಟೋಬರ್ 21, 2019
22 °C

ಜಾಲಪ್ಪ ಪುತ್ರನ ಮನೆಯಲ್ಲಿ ಐಟಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ

Published:
Updated:

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ನಗರದ ಸೋಮೇಶ್ವರ ಬಡಾವಣೆಯಲ್ಲಿರುವ  ಆರ್.ಎಲ್.ಜಾಲಪ್ಪ ಅವರ ಮೂರನೇ ಪುತ್ರ ಜೆ.ರಾಜೇಂದ್ರ ಅವರ ಮನೆ ಹಾಗೂ ನಗರದ ಹೊರವಲಯದಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ವಿವಿಯಲ್ಲಿನ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಗುರುವಾರ ಬೆಳಗಿನಿಂದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಎರಡು ಖಾಸಗಿ ಇನೋವ ಕಾರಿನಲ್ಲಿ ಬಂದಿರುವ ಎಂಟು ಜನರಿರುವ ಅಧಿಕಾರಿಗಳ ತಂಡ ದಾಖಲೆಗಳ ಪರಶೀಲನೆಯಲ್ಲಿ ತೊಡಗಿದೆ.

ಸೋಮೇಶ್ವರ ಬಡಾವಣೆಯ ಜೆ.ರಾಜೇಂದ್ರ ಅವರ ಮನೆಯಲ್ಲಿ ನಾಲ್ಕು ಜನ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತಿದ್ದಾರೆ. ಮನೆಯ ಬಾಗಿಲು ಹಾಕಿಲ್ಲ. ಹೀಗಾಗಿ ಅಧಿಕಾರಿಗಳು ಮನೆಯ ಒಳಗೆ ಕುಳಿತು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವುದು ಕಾಣುತ್ತದೆ. ಮನೆಯವರು ಎಂದಿನಂತೆಯೆ ಒಡಾಡಿಕೊಂಡು ಕೆಲಸದಲ್ಲಿ ತೊಡಗಿದ್ದ ದೃಶ್ಯ ಕಂಡು ಬಂತು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)