ದೇವನಹಳ್ಳಿ: ಜಾತ್ಯತೀತ ಜನತಾದಳ ಪಕ್ಷ ಸಂಘಟನೆಗಾಗಿ ಆಗಸ್ಟ್ 24ಕ್ಕೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ‘ಜನರೊಂದಿಗೆ ಜಾತ್ಯಾತೀತ ಜನತಾದಳ’ ಎಂಬ ಶೀರ್ಷಿಕೆಯಡಿ ಡಿಜಿಟಲ್ ಸದಸ್ಯತ್ವ ನೋಂದಣಿ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದರು.

ಕಾರ್ಯಕ್ರಮದ ಯಶಸ್ಸಿಗಾಗಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದೆ. ಸಮಾವೇಶದಲ್ಲಿ 30 ಸಾವಿರ ಕಾರ್ಯಕರ್ತರು ಮತ್ತು 250ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಲಿವೆ. ಮುಂಬರುವ ತಾಲ್ಲೂಕು, ಜಿಲ್ಲಾ ಮತ್ತು ಗ್ರಾಮ ಪಂಚಾಯತಿ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸವಾಗುತ್ತದೆ ಎಂದರು.

ಘೋಷವಾಕ್ಯಕ್ಕೆ ತಕ್ಕಂತೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ರೂಪಿಸಲಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಸಮಾವೇಶದಲ್ಲಿ ಪಾಲ್ಗೂಂಡು ಕಾರ್ಯಕ್ರಮವನ್ನು ಯಶ್ವಸ್ಪಿಗೊಳಿಸಿ ಎಂದು ತಿಳಿಸಿದರು.

ಜಿಡಿಎಸ್ ತಾಲ್ಲೂಕು ಅಧ್ಯಕ್ಷ ಆರ್.ಮುನೇಗೌಡ , ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಮುನಿಕೃಷ್ಣ, ಜಿಲ್ಲಾ ಸಂಚಾಲಕ ಮುನಿರಾಜು, ಯುವ ಘಟಕದ ಅಧ್ಯಕ್ಷ ಹೊಸಹಳ್ಳಿ ಟಿ.ರವಿ, ಕುಂದಾಣ ಹೋಬಳಿ ಅಧ್ಯಕ್ಷ ಮನಗೊಂಡನಹಳ್ಳಿ ಜಗದೀಶ್ , ವಿಜಯಪುರ ಹೋಬಳಿ ಕೃಷ್ಣಪ್ಪ, ತೂಬಗೆರೆ ಹೋಬಳಿ ಜಗನ್ನಾಥ್ ಆಚಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.