ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ. 1ಕ್ಕೆ ಜೆಡಿಎಸ್ ಪಂಚರತ್ನ ಅಭಿಯಾನ: ಕೋಡಗುರ್ಕಿಯಲ್ಲಿ ಕಾರ್ಯಕರ್ತರ ಸಭೆ

Last Updated 9 ಅಕ್ಟೋಬರ್ 2022, 7:03 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಪ್ರತಿಯೊಂದು ಮನೆಗೆ ಮಾಹಿತಿ ತಲುಪಿಸುವ ಕೆಲಸವಾಗಬೇಕು. ಮುಂಬರುವ ಚುನಾವಣೆಗೆ 130 ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲ್ಲಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಇದಕ್ಕೆ ಎಲ್ಲರೂ ಸನ್ನದ್ಧರಾಗಿ ಕೆಲಸ ಮಾಡಬೇಕು’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕೋಡಗುರ್ಕಿಯ ಕತ್ತಿ ಮಾರಮ್ಮ ಸಮುದಾಯ ಭವನದಲ್ಲಿ ನಡೆದ ಜೆಡಿಎಸ್‌ ತಾಲ್ಲೂಕು ಘಟಕ ಹಾಗೂ ಕಸಬಾ ಹೋಬಳಿ ಘಟಕದ ಕಾರ್ಯಕರ್ತರ ಸಭೆ, ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಜೆಡಿಎಸ್ ಸಂಕಲ್ಪ ಯಾತ್ರೆಯಲ್ಲಿ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಬೇಕು ಎಂದರು.

ಪಂಚರತ್ನ ಅಭಿಯಾನಕ್ಕೆ ನ. 1ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಲನೆ ಸಿಗಲಿದೆ. ಆ ಮೂಲಕ ಪ್ರತಿ ಗ್ರಾ.ಪಂ.ನಲ್ಲಿಯೂ ಶಾಲೆ, ಆಸ್ಪತ್ರೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

‘ಇತ್ತೀಚೆಗೆ ಜೆಡಿಎಸ್ ಶಾಸಕರು ತೆಲಂಗಾಣ ರಾಜ್ಯಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲು ಶ್ರಮಿಸಲಾಗುವುದು. ರೈತ ಬಂಧು, ದಲಿತ ಬಂಧು ಯೋಜನೆಗಳು ಜನರಿಗೆ ಅನುಕೂಲಕರವಾಗಿವೆ. ತಾಲ್ಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ’ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ವಿ. ಮಂಜುನಾಥ್‌, ತಾಲ್ಲೂಕು ಜೆಡಿಎಸ್‌ ಘಟಕದ ಅಧ್ಯಕ್ಷ ಆರ್‌. ಮುನೇಗೌಡ, ಕಸಬಾ ಹೋಬಳಿ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಸಿ. ವೆಂಕಟೇಗೌಡ, ಪಿಕಾರ್ಡ್ ಬ್ಯಾಂಕ್‌ ಅಧ್ಯಕ್ಷ ಪಿ. ಪಟಾಲಪ್ಪ, ತಾಲ್ಲೂಕು ಸೊಸೈಟಿ ಅಧ್ಯಕ್ಷ ಎ. ದೇವರಾಜ್, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಕಾಮೇನಹಳ್ಳಿ ರಮೇಶ್, ತಾಲ್ಲೂಕು ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ನೆರಗನಹಳ್ಳಿ ಶ್ರೀನಿವಾಸ್, ತಾ.ಪಂ. ಮಾಜಿ ಸದಸ್ಯ ಸಾದಹಳ್ಳಿ ಎಸ್‌. ಮಹೇಶ್, ಪಿಕಾರ್ಡ್ ಬ್ಯಾಂಕ್‌ ಮಾಜಿ ಅಧ್ಯಕ್ಷ ಸಿ. ಮುನಿರಾಜು, ಅಣ್ಣೇಶ್ವರ ಗ್ರಾ.ಪಂ. ಮಾಜಿ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಎಸ್‌.ಟಿ ಘಟಕದ ಅಧ್ಯಕ್ಷ ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT