ದೇವನಹಳ್ಳಿ: ‘ರಾಷ್ಟ್ರೀಯ ಪಕ್ಷಗಳು ಕನ್ನಡಿಗರ ಕ್ಷೇಮಾಭಿವೃದ್ಧಿಯ ಕೆಲಸ ಬಿಟ್ಟು ರಾಷ್ಟ್ರದ ಅಭಿವೃದ್ಧಿ ಹೆಸರಿನಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತವೆ. ಕನ್ನಡಿಗರ ಉಳಿವಿಗೆ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕಿದೆ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹೊಸಳಿ ಟಿ. ರವಿ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಶುಕ್ರವಾರ ಜೆಡಿಎಸ್ ಯುವ ಘಟಕದಿಂದ ಹಮ್ಮಿಕೊಂಡಿದ್ದ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದ ಗಡಿ ಸಮಸ್ಯೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿಯೂ ಕನ್ನಡಿಗರಿಗೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕಿದೆ. ಇದಕ್ಕಾಗಿ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರನ್ನು ಪೂರ್ಣ ಬಹುಮತದಿಂದ ಮುಖ್ಯಮಂತ್ರಿ ಮಾಡುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ರಾಜಕೀಯ ಬೇರೆ, ನಾಡಾಭಿಮಾನ ಬೇರೆಯಾಗಿದೆ. ನಾಡು, ನುಡಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ಹೈಕಮಾಂಡ್ ಅಣತಿಯಂತೆ ಸ್ವಾಭಿಮಾನಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತವೆ. ಆದರೆ ಪ್ರಾದೇಶಿಕ ಪಕ್ಷಕ್ಕೆ ಅಂತಹ ಸಂದಿಗ್ಧ ಸ್ಥಿತಿ ಎದುರಾಗುವುದಿಲ್ಲ. ಎಲ್ಲರೂ ಭಾರತೀಯರೇ ಆದರೂ ನಾವು ಮೊದಲು ಕನ್ನಡಿಗರು ಎಂದು ತಿಳಿಸಿದರು.

ಕನ್ನಡ ಸಂಘಟನೆಗಳೊಂದಿಗೆ ಕಾರ್ಯಾಗಾರ ಮಾಡಿ ಕರುನಾಡಿನ ಜ್ವಲಂತ ಸಮಸ್ಯೆಗಳನ್ನು ತಿಳಿದುಕೊಂಡಿರುವ ಏಕೈಕ ಪಕ್ಷ ಜೆಡಿಎಸ್ ಆಗಿದೆ. ನಮ್ಮ ಭೂಮಿ ಉಳಿಸಿಕೊಳ್ಳದಿದ್ದರೆ ಮುಂದೊಂದು ದಿನ ನಮ್ಮ ಮಕ್ಕಳೇ ಆಧುನಿಕ ದಾಸ್ಯಕ್ಕೆ ಒಳಗಾಗುತ್ತಾರೆ. ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡಿ ರಾಜ್ಯದ ಅವಿಭಾಜ್ಯ ಅಂಗ ಎಂದು ದಿಟ್ಟತನ ತೋರಿದ್ದು ಎಚ್.ಡಿ. ಕುಮಾರಸ್ವಾಮಿ ಅವರ ಹೆಗ್ಗಳಿಕೆ ಎಂದರು.

ತಾಲ್ಲೂಕಿನಾದ್ಯಂತ ಗೋಡೆ ಬರಹದ ಮೂಲಕ ಪ್ರಾದೇಶಿಕ ಪಕ್ಷಕ್ಕೆ ಬೆಂಬಲಿಸಿ ಕನ್ನಡಿಗರನ್ನು ಉಳಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಯುವ ಕಾರ್ಯಕರ್ತರು ಸಮರೋಪಾದಿಯಲ್ಲಿ ಭಾಗಿಯಾಗುತ್ತಿದ್ದಾರೆ. ಚುನಾವಣೆ ಹೊರತಾಗಿಯೂ ಕನ್ನಡಿಗರ ರಕ್ಷಣೆಗೆ ಕಂಕಣಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಜೆಡಿಎಸ್ ಕಾರ್ಯಾಧ್ಯಕ್ಷ ಮನೋಹರ್, ಸಂಘಟನಾ ಕಾರ್ಯದರ್ಶಿ ಮಧು ಎ.ಎಂ. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.