ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಪುರಸಭೆ ಚುನಾವಣೆ: ಜೆಡಿಎಸ್‌ಗೆ ಭರ್ಜರಿ ಗೆಲುವು

Last Updated 30 ಏಪ್ರಿಲ್ 2021, 7:55 IST
ಅಕ್ಷರ ಗಾತ್ರ

ವಿಜಯಪುರ: 8 ವರ್ಷಗಳ ನಂತರ ನಡೆದ ಪುರಸಭಾ ಚುನಾವಣೆಯಲ್ಲಿ ಜೆಡಿಎಸ್ 13 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪುರಸಭೆಯ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ. ಜೆಡಿಎಸ್ ಪಾಳೇಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಈ ಬಾರಿ ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕು ಎನ್ನುವ ಛಲದೊಂದಿಗೆ ಕೊರೊನಾ ಸೋಂಕು ಪ್ರಬಲವಾಗಿ ಹರಡುತ್ತಿರುವ ಸಂದರ್ಭದಲ್ಲಿಯೂ ಮನೆ ಮನೆಗೆ ಭೇಟಿ ನೀಡಿದ್ದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಪ್ರಯತ್ನ ಫಲಿಸಿದೆ.

ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿನ ಒಗ್ಗಟ್ಟು ಚುನಾವಣೆಯಲ್ಲಿ ಫಲಿತಾಂಶದ ರೂಪದಲ್ಲಿ ಹೊರಬಿದ್ದಿದೆ.
2013 ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ 16 ಸ್ಥಾನಗಳಲ್ಲಿ, ಜೆಡಿಎಸ್02, ಪಕ್ಷೇತರ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು.

16 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ ಅಧಿಕಾರವನ್ನು ಪೂರ್ಣ ಅವಧಿಗೆ ನಡೆಸಲು ವಿಫಲವಾಗಿ, ಮೀಸಲಾತಿ ವಿಚಾರದಲ್ಲಿ ಪದೇ ಪದೇ ನ್ಯಾಯಾಲಯಕ್ಕೆ ಹೋಗಿದ್ದರಿಂದ ಅವಧಿ ಮುಗಿದರೂ ಚುನಾವಣೆ ನಡೆದಿರಲಿಲ್ಲ. ಕಾಂಗ್ರೆಸ್ ಪಕ್ಷದ ಸದಸ್ಯರ ವರ್ತನೆಯಿಂದ ಜನರು ಬೇಸತ್ತಿದ್ದರು.

ಕಾಂಗ್ರೆಸ್ ಪಕ್ಷದ ನಾಯಕರೂ ಕೂಡಾ ಪಕ್ಷದ ಮುಖಂಡರಲ್ಲಿನ ಒಳಜಗಳವನ್ನು ಸರಿಪಡಿಸುವಲ್ಲಿ ವಿಫಲರಾಗಿ ಚುನಾವಣೆ ಘೋಷಣೆಯಾದ ನಂತರದಲ್ಲಿ ಬಂದು ಮತದಾರರನ್ನು ಮನವೊಲಿಸುವ ಪ್ರಯತ್ನ ಮಾಡಿದರೂ ತೃಪ್ತರಾಗದ ಜನತೆ ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತವನ್ನು ನೀಡಿದ್ದಾರೆ. ಟಿಕೆಟ್ ಹಂಚಿಕೆ ವೇಳೆಯೂ ಕೂಡಾ ಕೆಲ ನಾಯಕರುಗಳು ತಾವು ಹೇಳಿದವರಿಗೆ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದರಿಂದ ಬೇಸರಗೊಂಡಿದ್ದ ಆಕಾಂಕ್ಷಿಗಳಿಂದಾಗಿಯೂ ಪಕ್ಷಕ್ಕೆ ಹಿನ್ನಡೆಯಾಗಿದೆ.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಕಾಂಗ್ರೆಸ್ ನವರ ದುರಾಡಳಿತದಿಂದ ಬೇಸತ್ತಿದ್ದ ಜನರು, ಎಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ಮಾಡಿರುವ ಜನಪರವಾದ ಕಾರ್ಯಕ್ರಮಗಳು ಹಾಗೂ ವಿಜಯಪುರ ಪಟ್ಟಣದ ಅಭಿವೃದ್ಧಿಗಾಗಿ ಮಾಡಿದ್ದ ಕಾರ್ಯಕ್ರಮಗಳನ್ನು ಮೆಚ್ಚಿ ಜನರು ನೀಡಿರುವ ಅವಕಾಶವನ್ನು ಸದುಪಯೋಗ ಮಾಡಿಕೊಂಡು, ಪುರಸಭೆಯ ಆರ್ಥಿಕ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತದೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ವಿ.ಮಂಜುನಾಥ್ ಮಾತನಾಡಿ, ಕಳೆದ ಬಾರಿ ನೀಡಿದ್ದ ಅವಕಾಶವನ್ನು ದುರುಪಯೋಗ ಮಾಡಿಕೊಂಡು, ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ಜನವಿರೋಧಿ ನೀತಿಯ ವಿರುದ್ಧವಾಗಿ ಜನರು ಮತ ನೀಡಿದ್ದಾರೆ. ಕಾಂಗ್ರೆಸ್‌ಗೆ ಬೆನ್ನೆಲುಬಾಗಿದ್ದ ಅಲ್ಪಸಂಖ್ಯಾತರು, ಕಾಂಗ್ರೆಸ್ ವಿರುದ್ಧ ಮುನಿದು ಜೆಡಿಎಸ್‌ಗೆ ಮತ ನೀಡಿದ್ದಾರೆ. ನಾವು ಅವಲೋಕನ ಮಾಡಬೇಕಾಗಿದೆ ಮುಖಂಡರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT