ಜಿಗಣಿ (ಆನೇಕಲ್): ಕುಡಿಯುವ ನೀರಿಗೆ ಆಗ್ರಹಿಸಿ ತಾಲ್ಲೂಕಿನ ಪೊಲೀಸ್ ಬಡಾವಣೆ ನಿವಾಸಿಗಳು ಹೆನ್ನಾಗರ ಗ್ರಾಮ ಪಂಚಾಯಿತಿ ಮುಂಭಾಗ ಗುರುವಾರ ಖಾಲಿಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಕಾಚನಾಯಕನಹಳ್ಳಿ ಸಮೀಪದ ಪೊಲೀಸ್ ಬಡಾವಣೆಯಲ್ಲಿ ಕುಡಿಯುವ ನೀರಿನ ಪೂರೈಕೆಯಾಗುತ್ತಿಲ್ಲ. ಕುಡಿಯುವ ನೀರಿಗಾಗಿ ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿದ್ದಾರೆ. ವಾರಕ್ಕೆ 2-3 ಟ್ಯಾಂಕರ್ ನೀರು ಹಾಕಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ದುಡಿಯುವ ಶೇ 20ರಷ್ಟು ಸಂಪಾದನೆಯನ್ನು ನೀರಿನ ಮೇಲೆಯೇ ಹಾಕಬೇಕಾದ ಪರಿಸ್ಥಿತಿಯಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಹೆನ್ನಾಗರ ಗ್ರಾಮ ಪಂಚಾಯಿತಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಒತ್ತಾಯಿಸಿ ನಾಲ್ಕೈದು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಪೊಲೀಸ್ ಬಡಾವಣೆಯ ಹೆಚ್ಚಾಗಿ ನಿವೃತ್ತ ಪೊಲೀಸ್ ಸಿಬ್ಬಂದಿ ವಾಸವಿದ್ದಾರೆ. ಆದರೆ ಇಲ್ಲಿ ಮೂಲ ಸೌಕರ್ಯವು ಇಲ್ಲ. ಕುಡಿಯುವ ನೀರಿಗೂ ತಾತ್ವರ. ಹಣ ನೀಡಿ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳಬೇಕಿದೆ ಎಂದು ಪೊಲೀಸ್ ಬಡಾವಣೆಯ ನಿವಾಸಿ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-15-141969179

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.