ಜಿಗಣಿ (ಆನೇಕಲ್): ಜಿಗಣಿ ಹೋಬಳಿ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ-ಕಾಚನಾಯಕನಹಳ್ಳಿ ಗ್ರಾಮದ ಸಂಪರ್ಕ ರಸ್ತೆ ಹದಗೆಟ್ಟಿದ್ದು ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿ ಸ್ಥಳೀಯರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಿಂದ ಕಾಚನಾಯಕನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿಗಳಿಂದ ತುಂಬಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಂಚರಿಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳು, ಉದ್ಯೋಗಿಗಳು ಈ ರಸ್ತೆಯಲ್ಲಿ ಸಂಚರಿಸಲು ಭಯ ಪಡುತ್ತಿದ್ದಾರೆ. ಗುಂಡಿಗಳಲ್ಲಿ ಬಿದ್ದು ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಅಭಿವೃದ್ಧಿಪಡಿಬೇಕು. ಇಲ್ಲವಾದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸ್ಥಳೀಯ ಕಾಚನಾಯಕನಹಳ್ಳಿ ಶಶಿಕಿರಣ್ ‘ಪ್ರಜಾವಾಣಿ’ಗೆ ತಿಳಿಸಿದರು.

ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಉಪಯೋಗವಾಗಿಲ್ಲ. ಮುಂದಿನ ಒಂದು ತಿಂಗಳಲ್ಲಿ ರಸ್ತೆ ಅಭಿವೃದ್ಧಿಪಡಿಸದಿದ್ದಲ್ಲಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಧರಣಿ ಆಯೋಜಿಸಲಾಗುವುದು ಎಂದು ತಿಳಿಸಿದರು.

ಮುಖಂಡರಾದ ರಾಜಣ್ಣ, ಮಂಜುನಾಥ್, ಮಧು, ರಂಗಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-15-1069292864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.