ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ’

Last Updated 13 ಜೂನ್ 2019, 14:29 IST
ಅಕ್ಷರ ಗಾತ್ರ

ವಿಜಯಪುರ: ಮಕ್ಕಳ ಭವಿಷ್ಯಕ್ಕೆ ಮಾರಕವಾಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್ ಹೇಳಿದರು.

ಇಲ್ಲಿನ ಹಿರಿಯ ಬಾಲಕರ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಬಾಲ ಕಾರ್ಮಿಕರ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಇಂದಿಗೂ ಮಕ್ಕಳನ್ನು ದುಡಿಮೆಗೆ ಸೇರಿಸಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯ ಇದೆ. ಶಿಕ್ಷಣದಿಂದ ಮಾತ್ರ ಈ ಅನಿಷ್ಟ ಪದ್ಧತಿ ನಿರ್ಮೂಲನೆಗೊಳಿಸಲು ಸಾಧ್ಯ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ನಗರ ಘಟಕದ ಅಧ್ಯಕ್ಷ ಜೆ.ಆರ್.ಮುನಿವೀರಣ್ಣ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯಿಂದಾಗಿ ಕೆಲ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಪಾಲಕರು ತಮ್ಮ ಮಕ್ಕಳಿಗೆ ಸಂವಿಧಾನಬದ್ಧ ಶಿಕ್ಷಣದ ಹಕ್ಕು ನೀಡಲು ಜವಾಬ್ದಾರಿ ವಹಿಸಿಕೊಳ್ಳಬೇಕು. ಮಗು ಅಪಾಯದಲ್ಲಿರುವುದು ಕಂಡುಬಂದ್ದಲ್ಲಿ 1098ಗೆ ಕರೆಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ತಾಲ್ಲೂಕು ಕಸಾಪ ಅಧ್ಯಕ್ಷ ರಾಮಕೃಷ್ಣ ಹೆಗಡೆ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಜಯಶೇಖರ್, ಮುರಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT