ಭಾನುವಾರ, ಡಿಸೆಂಬರ್ 6, 2020
19 °C

ಹಿಂಡಿಗನಾಳ: ಕಲ್ಯಾಣಿ ಸ್ವಚ್ಛತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡಿಗನಾಳ ಗ್ರಾಮದ ಸಂತೆ ಹತ್ತಿರವಿರುವ ಶ್ರೀ ಅಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ಪುರಾತನ ಕಲ್ಯಾಣಿಯನ್ನು ಶನಿವಾರ ಸ್ವಚ್ಛ ಮಾಡಲಾಯಿತು.

ಸ್ವಚ್ಛತಾ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಎಸ್. ಶ್ರೀನಾಥ್ ಗೌಡ ಹಾಗೂ ಸಹಾಯಕ ನಿರ್ದೇಶಕ ಅಮರನಾರಾಯಣಸ್ವಾಮಿ ಡಿ.ಎಂ. ಚಾಲನೆ ನೀಡಿದರು. ತಾಲ್ಲೂಕು ವ್ಯಾಪ್ತಿಯ ಎಲ್ಲ 28 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಬಿಲ್ ಕಲೆಕ್ಟರ್‌ಗಳು ಮತ್ತು ಕಂಪ್ಯೂಟರ್ ಆಪರೇಟರ್‌ಗಳು ಶ್ರಮದಾನ ಮಾಡಿದರು. ಈ ಮೂಲಕ ಕಲ್ಯಾಣಿ ಅಭಿವೃದ್ಧಿ ಮತ್ತು ಸ್ವಚ್ಛಗೊಳಿಸಿದರು.

ಸ್ಥಳಕ್ಕೆ ಶಾಸಕ ಶರತ್ ಬಚ್ಚೇಗೌಡ ಭೇಟಿ ನೀಡಿ ಕಾರ್ಯಕ್ರಮವನ್ನು ಆಯೋಜಿಸಿರುವ ತಾಲ್ಲೂಕು ಆಡಳಿತದ ಕೆಲಸವನ್ನು ಶ್ಲಾಘಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು