ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕ ಜಯಂತಿ ಸರಳ ಆಚರಣೆಗೆ ನಿರ್ಧಾರ

Last Updated 12 ನವೆಂಬರ್ 2019, 12:49 IST
ಅಕ್ಷರ ಗಾತ್ರ

ದೇವನಹಳ್ಳಿ: ಕನಕದಾಸರ ಜಯಂತಿಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸಮುದಾಯದ ವತಿಯಿಂದ ಸರಳವಾಗಿ ಆಚರಣೆ ನಡೆಯಲಿದೆ ಎಂದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಪಿ.ರವಿಕುಮಾರ್ ತಿಳಿಸಿದರು.

ಕನಕ ಭವನದಲ್ಲಿ ನಡೆದ ಪೂರ್ವಭಾವಿಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣಾ ನೀತಿ ಸಂಹಿತೆಯಿಂದಾಗಿ ಜನಪ್ರತಿನಿಧಿಗಳ ಭಾಷಣಕ್ಕೆ ಅವಕಾಶವಿಲ್ಲ. ನ.15ರಂದು ಬೆಳಿಗ್ಗೆ 9ಕ್ಕೆ ತಹಶೀಲ್ದಾರ್ ಕಚೇರಿಯಲ್ಲಿ ನಡೆಯುವ ಕನಕ ಜಯಂತಿಯಲ್ಲಿ ಭಾಗವಹಿಸಿದ ನಂತರ 10ಕ್ಕೆ ಬೈಪಾಸ್ ರಸ್ತೆಯ ಬಳಿಯಕನಕ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುತ್ತದೆ.ನಂತರ ಅಲಂಕೃತ ಬೆಳ್ಳಿ ರಥದಲ್ಲಿ ಮೆರವಣಿಗೆ ಮೂಲಕ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ಕನಕ ಭವನದಲ್ಲಿ ಸಮಾವೇಶಗೊಳ್ಳಲಿದೆ’ ಎಂದರು.

ಪುರಸಭೆ ಸದಸ್ಯ ಜಿ.ಎ.ರವೀಂದ್ರ ಮಾತನಾಡಿ, ‘ಜಯಂತಿ ಸರಳವಾಗಿ ಆಚರಿಸಿದರೂ ಜನಪದ ಸಾಂಸ್ಕೃತಿಕ ಕಲಾ ತಂಡಗಳು ಪಾಲ್ಗೊಳ್ಳುತ್ತವೆ. ವೇದಿಕೆ ಕಾರ್ಯಕ್ರಮ ಇರುವುದಿಲ್ಲ. ವ್ಯವಸಾಯ ಸೇವಾ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘ, ಪುರಸಭೆ ವಿವಿಧ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಗೊಂಡಿರುವ ಅಧ್ಯಕ್ಷರಿಗೆ, ಸದಸ್ಯರಿಗೆ ಸನ್ಮಾನಿಸಲಾಗುತ್ತದೆ.ಕಳೆದ ವರ್ಷ ಶೈಕ್ಷಣಿಕ ಸಾಲಿನಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಜಯಂತಿಗೆ ಆಹ್ವಾನ ಪತ್ರಿಕೆ ಇರುವುದಿಲ್ಲ. ಸಮುದಾಯದವರು, ಸಾರ್ವಜನಿಕರು ಸಕಾಲದಲ್ಲಿ ಭಾಗವಹಿಸಬೇಕು’ ಎಂದು ಕೋರಿದರು.

ಕುರುಬರ ಸಂಘ ತಾಲ್ಲೂಕು ಘಟಕ ಗೌರವಾಧ್ಯಕ್ಷ ಮುನಿನಂಜಪ್ಪ ಮಾತನಾಡಿ, ‘ನಾಲ್ಕೈದು ವರ್ಷಗಳಿಂದ ಕನಕ ಜಯಂತಿಗೆ ಅಡ್ಡಿಯಾಗುತ್ತಲೇ ಇದೆ. ವಿಭಿನ್ನವಾಗಿ ಆಚರಣೆ ಮಾಡಬೇಕು ಎಂದು ಚಿಂತನೆ ಇಟ್ಟುಕೊಂಡ ಸಂದರ್ಭದಲ್ಲಿ ವಿಘ್ನಗಳು ಬರುತ್ತವೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕುರುಬ ಸಂಘ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ರಮೇಶ್, ತಾಲ್ಲೂಕು ಘಟಕ ಉಪಾಧ್ಯಕ್ಷ ನಾಗರಾಜ್, ಖಜಾಂಚಿ ವೇಣುಗೋಪಾಲ್, ಮಹಿಳಾ ಘಟಕ ತಾಲ್ಲೂಕು ಅಧ್ಯಕ್ಷೆ ಶಶಿಕಲಾ, ಕಾರ್ಯದರ್ಶಿ ಮಹಾದೇವಿ, ಕುರುಬ ಸಂಘ ಯುವಘಟಕ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಮುನಿರಾಜು, ಮುಖಂಡರಾದ ರವಿಪ್ರಕಾಶ್, ಬೀರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT