ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಚ್ಚಿದ ಹೆಣ್ಣು ಮಕ್ಕಳ ಮೇಲಿನ ಶೋಷಣೆ; ಕನ್ನಡ ಜಾಗೃತಿ ವೇದಿಕೆ ಪ್ರತಿಭಟನೆ

Published : 18 ಸೆಪ್ಟೆಂಬರ್ 2024, 14:08 IST
Last Updated : 18 ಸೆಪ್ಟೆಂಬರ್ 2024, 14:08 IST
ಫಾಲೋ ಮಾಡಿ
Comments

ದೊಡ್ಡಬಳ್ಳಾಪುರ: ಹೆಣ್ಣು ಮಕ್ಕಳ ರಕ್ಷಣೆಗೆ ಕಠಿಣ ಕಾನೂನು ಜಾರಿ ಹಾಗೂ ಡ್ರಗ್ಸ್ ಮಾಫಿ ತಡೆಯಬೇಕು ಎಂದು ಆಗ್ರಹಿಸಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ನಗರದ ತಾಲ್ಲೂಕು ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಮತ್ತು ದೇಶದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಶೋಷಣೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವ ಪೀಳಿಗೆ ಡ್ರಗ್ಸ್ ಮಾಫಿಯಾಗೆ ಮಾರುಹೋಗುತ್ತಿದ್ದಾರೆ.‌ ಈ ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತು ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಎಂ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಸಿ.ಶಶಿಧರ್ ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಕರ್, ಉಪಾಧ್ಯಕ್ಷ ಗಿರೀಶ್, ಹೇಮಂತ್ ಕುಮಾರ್, ಯುವ ಘಟಕದ ತಾಲ್ಲೂಕು ಅಧ್ಯಕ್ಷ ಅಜಿತ್ ಕುಮಾರ್, ತರುಣ್ ಸರ್ಜಾ, ಕಾರ್ಮಿಕ ಘಟಕದ ಅಧ್ಯಕ್ಷ ಕೆ.ಆರ್‌.ಗುರುಪ್ರಸಾದ್, ಗೌರವ ಅಧ್ಯಕ್ಷ ಶಿವಲಿಂಗಯ್ಯ, ಜಿಲ್ಲಾ ಮುಖಂಡ ಅಗ್ನಿವೆಂಕಟೇಶ್,ತಾಲ್ಲೂಕು ಸಂಚಾಲಕ ಮಹದೇವ್, ವಿಶ್ವನಾಥ್, ರವಿಕುಮಾರ್, ಧನಂಜಯ, ಸಂಘಟನೆ ಕಾರ್ಯದರ್ಶಿ ಸಂಘಟನಾ ಕಾರ್ಯದರ್ಶಿ ಮುನಿಆಂಜನಪ್ಪ, ಜಗದೀಶ್, ಕಾನೂನು ಸಲಹೆಗಾರ ಶ್ರೀನಿವಾಸ್, ಕಿರಣ್‌ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT