ಹಕ್ಕೊತ್ತಾಯ ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಹಲವು ಬಾರಿ ಅನ್ಯಾಯವಾಗುತ್ತಿದೆ | ಈ ಬಗ್ಗೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು | ಕೈಗಾರಿಕಾ ಪ್ರದೇಶದಲ್ಲಿ ಅನ್ಯಭಾಷಿಕರಿಗೆ ಕನ್ನಡ ಕಲಿಸಲು ಸರ್ಕಾರ ಕಾರ್ಯಕ್ರಮವೊಂದನ್ನು ಜಾರಿ ಮಾಡಬೇಕು | ಸರ್ಕಾರಿ ಶಾಲೆಗಳ ಉಳಿವಿಗೆ ಪ್ರಥಮ ಆದ್ಯತೆ ನೀಡಬೇಕು
ಕಾಲ್ನಡಿಗೆ ಜಾಥದಲ್ಲಿ ಕಾರ್ಯಕರ್ತರು ತಮಟೆ ಸದ್ದಿಗೆ ಹೆಜ್ಜೆ ಹಾಕಿದರು
ಕನ್ನಡ ಪರ ಸಂಘಟನೆಗಳಲ್ಲಿ ಮಹಿಳೆಯರು ಹೆಚ್ಚು ಪ್ರಾತಿನಿಧ್ಯ ನೀಡಬೇಕು. ಇದರಿಂದ ಕನ್ನಡ ಹೋರಾಟಕ್ಕೆ ಬಲ ಸಿಗಲಿದೆ. ಈ ನಿಟ್ಟಿನಲ್ಲಿ ಕನ್ನಡ ಜಾಗೃತಿ ವೇದಿಕೆಯು ರಾಜ್ಯದ್ಯಾಂತ ಮಹಿಳಾ ಘಟಕ ಸ್ಥಾಪಿಸಲಾಗುವುದು