ಶುಕ್ರವಾರ, ಜನವರಿ 22, 2021
22 °C

ಸಚಿವ ಸ್ಥಾನ ನಿರೀಕ್ಷೆಯಲ್ಲಿ ಎಂ.ಟಿ.ಬಿ ನಾಗರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಗರಿಗೆದರಿದೆ. ಅದರಂತೆ ಸಚಿವ ಸ್ಥಾನದ ಆಕಾಂಕ್ಷೆಯಲ್ಲಿರುವ ತಾಲ್ಲೂಕಿನ ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಅವರ ಬೆಂಬಲಿಗರು ನಾಯಕನ ಪದಗ್ರಹಣ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ಎಂ.ಟಿ.ಬಿ ನಾಗರಾಜ್ ಕಳೆದ ವಿಧಾನಸಭಾ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೆಗೌಡ ಎದುರು ಸೋತ ನಂತರ ಅವರಿಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅನುಮಾನ ಮೂಡಿತ್ತು.

ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಅವರ ಮಂತ್ರಿಗಿರಿ ಆಕಾಂಕ್ಷೆಯನ್ನು ಜೀವಂತವಾಗಿಟ್ಟಿದ್ದಾರೆ. ಕಳೆದ ಸಚಿವ ಸಂಪುಟದ ವಿಸ್ತರಣೆಯಲ್ಲಿಯೇ ಸ್ಥಾನದ ನಿರೀಕ್ಷೆಯಲ್ಲಿದ್ದ ಅವರು ಈಗಲಾದರೂ ಸಚಿವರಾಗುತ್ತಾರೆಯೇ ಕಾದು ನೋಡಬೇಕಾಗಿದೆ ಎನ್ನುತ್ತಾರೆ ಕಾರ್ಯಕರ್ತರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು