ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ತಿಬೆಲೆ ಪಟಾಕಿ ದುರಂತ: ಅಕ್ರಮ ಮಳಿಗೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

Published 8 ಅಕ್ಟೋಬರ್ 2023, 5:32 IST
Last Updated 8 ಅಕ್ಟೋಬರ್ 2023, 5:32 IST
ಅಕ್ಷರ ಗಾತ್ರ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ‌ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುವುದು, ಮಳಿಗೆ ತೆರೆಯಲು ಅನುಮತಿ‌ ನೀಡಿದ್ದ ಎಲ್ಲ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ‌ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್ ಹೇಳಿದರು.

ಘಟನಾ ಸ್ಥಳಕ್ಕೆ‌ ಭೇಟಿ ನೀಡಿದ ಅವರು, ಘಟನೆ ಬಗ್ಗೆ ಮಾಹಿತಿ ನೀಡಿದರು.

'ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಪಟಾಕಿ‌ ಮಳಿಗೆ ಇದೆ. ಯಾರೆಲ್ಲ ಅನುಮತಿ ಕೊಡುವ ಪ್ರಕ್ರಿಯೆಯಲ್ಲಿ ಇದ್ದರೆಂಬುದನ್ನು ತಿಳಿಯುತ್ತೇವೆ. ಇದಕ್ಕಾಗಿ ತನಿಖೆ ನಡೆಸುತ್ತೇವೆ. ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು ಹಾಗೂ ಇತರೆ ಯಾವುದೇ ಅಧಿಕಾರಿಗಳು ಇದ್ದರೂ ಅವರ ವಿರುದ್ಧ ಕ್ರಮ ಖಚಿತ' ಎಂದರು.

'ರಾಜ್ಯದಲ್ಲಿ ಪಟಾಕಿ‌ ಮಳಿಗೆ ಸ್ಥಾಪನೆ ನಿಯಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಿಯಮ ತಿದ್ದುಪಡಿ ಬಗ್ಗೆಯೂ ಚರ್ಚಿಸಲಾಗುವುದು' ಎಂದರು

ಪಟಾಕಿ ದುರಂತದ‌ಲ್ಲಿ ಸುಟ್ಟು ಕರಕಲಾಗಿರುವ ವಾಹನ

ಪಟಾಕಿ ದುರಂತದ‌ಲ್ಲಿ ಸುಟ್ಟು ಕರಕಲಾಗಿರುವ ವಾಹನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT