ಬುಧವಾರ, ಆಗಸ್ಟ್ 21, 2019
28 °C

ನೆರೆ ಸಂತ್ರಸ್ತರಿಗೆ ನೆರವಾದ ಶಾಸಕ ಟಿ.ವೆಂಕಟರಮಣಯ್ಯ

Published:
Updated:
Prajavani

ದೊಡ್ಡಬಳ್ಳಾಪುರ: ‘ನೆರೆ ಸಂತ್ರಸ್ತರ ನೆರವಿಗೆ ಸ್ಪಂದಿಸುವ ಸಲುವಾಗಿ ಒಂದು ತಿಂಗಳ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಭಾನುವಾರ ನಗರದಲ್ಲಿ ಪಾದಯಾತ್ರೆ ನಡೆಸುವ ಮೂಲಕ ನೆರೆ ಸಂತ್ರಸ್ತರ ನೆರವಿಗಾಗಿ ದೇಣಿಗೆ ಹಾಗೂ ವಸ್ತು
ಗಳನ್ನು ಅವರು ಸಂಗ್ರಹಿಸಿದರು.

ನಗರದ ತರಕಾರಿ ಮಾರುಕಟ್ಟೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ.ತಾಲ್ಲೂಕಿನಲ್ಲಿ ಸಂಗ್ರಹವಾಗಿರುವ ವಸ್ತುಗಳನ್ನು ಆ 17 ರಂದು ಸಂಜೆ ನಗರದಿಂದ ಕ್ಯಾಂಟರ್‌ ವಾಹನದ ಮೂಲಕ ಉತ್ತರ ಕರ್ನಾಟಕದ ಮಳೆ ಹಾನಿ ಪ್ರದೇಶಗಳಿಗೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.

Post Comments (+)