ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ: ಕೋಟಿ ಸದಸ್ಯತ್ವ ಗುರಿ

Last Updated 9 ಸೆಪ್ಟೆಂಬರ್ 2022, 2:58 IST
ಅಕ್ಷರ ಗಾತ್ರ

ದೇವನಹಳ್ಳಿ: ಕನ್ನಡ ಸಾಹಿತ್ಯ ಪರಿಷತ್‌ನ ಐದು ವರ್ಷದ ಅವಧಿಯಲ್ಲಿ ಒಂದು ಕೋಟಿ ಸದಸ್ಯತ್ವ ನೋಂದಣಿ ಮಾಡುವ ಗುರಿಯನ್ನು ಕೇಂದ್ರ ಪರಿಷತ್ತಿನ ಅಧ್ಯಕ್ಷ ಮಹೇಶ್‌ ಜೋಶಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್‌. ಕೃಷ್ಣಪ್ಪ ತಿಳಿಸಿದ್ದಾರೆ.

ಪರಿಷತ್‌ ಅನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಉದ್ದೇಶ ಹೊಂದಿದ್ದೇವೆ. ವಿಶ್ವದಾದ್ಯಂತ ಇರುವ ಎಲ್ಲಾ ಕನ್ನಡಿಗರನ್ನು ಒಂದಾಗಿಸುವುದೇ ನಮ್ಮ ಗುರಿ. ಕಸಾಪದ ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರ ದೇಶದಲ್ಲಿ ಘಟಕ ಸ್ಥಾಪಿಸುವ ದೃಷ್ಟಿಯಿಂದ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಪರಿಷತ್‌ಗೆ ಹೊಸ ನೋಂದಣಿ ಮಾಡಲು ಆನ್‌ಲೈನ್‌ ಮೂಲಕ ಸದಸ್ಯತ್ವ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಕಸಾಪ ಸದಸ್ಯತ್ವಕ್ಕೆ ₹ 500 ಶುಲ್ಕ ಇತ್ತು. ಅದನ್ನು ಇದೀಗ ₹ 250ಕ್ಕೆ ಇಳಿಸಲಾಗಿದೆ. ಸಾಧಾರಣ ಗುರುತಿನ ಚೀಟಿಯ ಬದಲಾಗಿ ಆತ್ಯಾಧುನಿಕ ತಂತ್ರಾಂಶದ ಚಿಪ್‌ ಹೊಂದಿರುವ ಸ್ಮಾರ್ಟ್‌ಕಾರ್ಡ್ ಗುರುತಿನ ಚೀಟಿಯನ್ನು ಸದಸ್ಯರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ನೂತನವಾಗಿ ಕನ್ನಡ ಸಾಹಿತ್ಯ ಪರಿಷತ್‌ನ ಸದಸ್ಯರಾಗಲು ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ‘ಕಸಾಪ’ ಆ್ಯಪ್ ಡೌನ್‌ಲೋಡ್‌ ಮಾಡಿಕೊಂಡು ನೋಂದಾಯಿಸಬಹುದು. kannadasahithyaparishattu.in ಲಿಂಕ್ ಮೂಲಕ ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ, ತಾಲ್ಲೂಕು ಘಟಕದ ಅಧ್ಯಕ್ಷರನ್ನು ಸಂಪರ್ಕಿಸಬಹುದು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT