ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ ಚುನಾವಣೆಗೆ ಅಭ್ಯರ್ಥಿ ಎಂ. ಪ್ರಕಾಶಮೂರ್ತಿ ಮತಯಾಚನೆ

Last Updated 15 ನವೆಂಬರ್ 2021, 5:08 IST
ಅಕ್ಷರ ಗಾತ್ರ

ಆನೇಕಲ್: ಬೆಂಗಳೂರು ನಗರ ಜಿಲ್ಲೆಯಲ್ಲಿ ಕನ್ನಡ ಭವನಗಳ ನಿರ್ಮಾಣ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸುವ ಮೂಲಕ ಕನ್ನಡದ ಪರಿಚಾರಕನಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂ. ಪ್ರಕಾಶಮೂರ್ತಿ ಮನವಿ ಮಾಡಿದರು.

ಅವರು ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಮತಯಾಚನೆ ಮಾಡಿ
ಮಾತನಾಡಿದರು.

‘ನ. 21ರಂದು ಕನ್ನಡ ಸಾಹಿತ್ಯ ಪರಿಷತ್‌ಗೆ ಚುನಾವಣೆ ನಡೆಯಲಿದೆ. ಆನೇಕಲ್‌ ತಾಲ್ಲೂಕಿನಲ್ಲಿ 1,700 ಮತಗಳಿದ್ದು ಅಧ್ಯಕ್ಷ ಸ್ಥಾನವನ್ನು ನಿರ್ಣಯಿಸುವ ಕ್ಷೇತ್ರವಾಗಿದೆ. ಕಳೆದ 30 ವರ್ಷಗಳಿಂದಲೂ ನಾಡು ನುಡಿ, ನೆಲ-ಜಲ ಸೇರಿದಂತೆ ಕನ್ನಡ ಪರ ಹೋರಾಟಗಳಲ್ಲಿ ಕನ್ನಡ ಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದೇನೆ. ಸಾಹಿತ್ಯ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡ ಸೇವೆಯಲ್ಲಿ ಭಾಗಿಯಾಗಿದ್ದೇನೆ. ಕನ್ನಡ ಸೇವೆಯನ್ನು ಮಾಡಲು ಎಲ್ಲಾ ಮತದಾರರು ಮತಚಲಾಯಿಸುವ ಮೂಲಕ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಮನವಿ ಮಾಡಿದರು.

ಕಂಠೀರವ ನೃತ್ಯ ಸಂಗೀತ ಸಭಾದ ಅಧ್ಯಕ್ಷ ಪಿ. ಧನಂಜಯ, ಜೇನುಗೂಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿ ಮಹೇಶ್‌ ಊಗಿನಹಳ್ಳಿ, ಮುಖಂಡರಾದ ಜಿ. ಗೋಪಾಲ್‌, ಮಲ್ಟಿಮೀಡಿಯ ಚಂದ್ರು, ಅಪ್ಸರ್‌ ಅಲಿಖಾನ್‌, ಸಮ್ಮೀವುಲ್ಲಾ, ಚುಟುಕು ಶಂಕರ್‌
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT