ದೊಡ್ಡಬಳ್ಳಾಪುರ: ತಾಲ್ಲೂಕಿನಿಂದ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ.

ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.

ಏ.19 ರಂದು ಬೆಳಗ್ಗೆ 21 ಜನರ ಒಂದು ತಂಡ ಅಮೃತಸರ ತಲುಪಿದರೆ, ವಿಮಾನ ಟಿಕೆಟ್ ಗೊಂದಲದ ಕಾರಣ 74 ಮಂದಿಯ ಮತ್ತೊಂದು ತಂಡ ದೇವನಹಳ್ಳಿ ಎಂ.ಆರ್. ಟ್ರಾವೆಲ್ ಏಜೆನ್ಸಿ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು.

ಅಮೃತಸರದಲ್ಲಿ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿಕೊಂಡು ಬಳಿಕ ಶ್ರೀನಗರಕ್ಕೆ ಪ್ರವಾಸ ತೆರಳಿದ್ದರು. ಇವರು ಉಳಿದುಕೊಳ್ಳಬೇಕಾದ ಹೋಟೆಲ್ ಉಗ್ರರ ದಾಳಿಗೆ ಒಳಗಾದ ಪಹಲ್ಗಾಮ್ನ ಬೈಸರನ್ ಸಮೀಪದಲ್ಲಿಯೇ ಎರಡು ದಿನಗಳ ಕಾಲ ಉಳಿದುಕೊಳ್ಳಲು ಕೊಠಡಿಗಳನ್ನು ಕಾಯ್ದಿರಿಸಿದ್ದರು. ಆದರೆ, ಆ ರಸ್ತೆಯಲ್ಲಿ ಬೆಟ್ಟ ಕುಸಿದು ಸಂಚಾರ ಸ್ಥಗಿತಗೊಂಡ ಕಾರಣ ಮಾರ್ಗ ಬದಲಿಸಿದ ಬೆಂಗಳೂರಿನ 15 ಜನ ಸೇರಿದಂತೆ 110 ಮಂದಿಯ ಪ್ರವಾಸಿಗರು, ಕಟ್ರಾ ವೈಷ್ಣವಿ ದೇವಿ ದರ್ಶನ ಮುಗಿಸಿ, ಕುನುಮೊನಾಲಿಗೆ ಹಿಂತಿರುಗಿದ್ದಾರೆ.
.ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿದ್ದರಾಮಯ್ಯ.Terror Attack: ಇಂದು ಸರ್ವಪಕ್ಷ ಸಭೆ, ಗುಪ್ತಚರ ವೈಫಲ್ಯದ ಕುರಿತು ಚರ್ಚೆ ಸಾಧ್ಯತೆ.ಸಂಪಾದಕೀಯ: ನಾಗರಿಕರ ಮೇಲೆ ಕೋಮು ಮನಃಸ್ಥಿತಿಯ ದಾಳಿ ಖಂಡನೀಯ.Pahalgam attack: ಮನೆ ತಲುಪಿದ ಮಂಜುನಾಥ ರಾವ್, ಭರತ್ ಭೂಷಣ್ ಪಾರ್ಥಿವ ಶರೀರಗಳು.
‘ಶ್ರೀನಗರಕ್ಕೆ ತೆರಳುವ ಮಾರ್ಗದಲ್ಲಿನ ಬೆಟ್ಟ ಕುಸಿಯದೇ ಇದ್ದಲ್ಲಿ ದೊಡ್ಡಬಳ್ಳಾಪುರದಿಂದ ಜಮ್ಮು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಪ್ರವಾಸಿಗರು ಕೂಡ ಉಗ್ರರ ದಾಳಿಯಿಂದ ತೊಂದರೆಗೆ ಒಳಗಾಗುವ ಸಂದರ್ಭ ಇತ್ತು’ ಎಂದು ಪ್ರವಾಸದಲ್ಲಿ ಇರುವ ಲಕ್ಷ್ಮೀದೇವಿಪುರ ಗ್ರಾಮದ ಶಿವರಾಜ್, ಸದ್ಯಕ್ಕೆ ಕುನುಮೊನಾಲಿ ಪ್ರವಾಸ ಮುಗಿಸಿಕೊಂಡು ಹಿಂತಿರುಗಲಾಗುವುದು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.