ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಭೆಗೆ ಗೈರಾದ ಅಧಿಕಾರಿಗಳು: ಕ್ರಮಕ್ಕೆ ವರದಿ

Last Updated 28 ಜನವರಿ 2020, 13:48 IST
ಅಕ್ಷರ ಗಾತ್ರ

ಸೂಲಿಬೆಲೆ: ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಗೆ ಬೆರಳಣಿಕೆಯಷ್ಟು ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರಿಂದ ಸಭೆ ಕೇವಲ ಔಪಚಾರಿಕವಾಗಿ ನಡೆಯಿತು. ಹಾಜರಾಗದ ಇಲಾಖೆ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಪಿಡಿಒ ಸುಂದರ್ ಹೇಳಿದರು.

ಪ್ರಾಥಮಿಕ ಆರೋಗ್ಯಾಧಿಕಾರಿ ಡಾ.ಶಶಿಕಲಾ ಅವರು ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮ ತಿಳಿಸಿದರು. ಪಶುವೈದ್ಯ ಮಂಜುನಾಥ್ ಇಲಾಖೆ ಕಾರ್ಯಕ್ರಮಗಳ ವಿವರ ನೀಡಿದರು.

ರೇಷ್ಮೆ ಇಲಾಖೆಯ ಶ್ರೀನಿವಾಸ ಮಾಹಿತಿ ನೀಡಿ, ರೇಷ್ಮೆ ಸಾಕಾಣಿಕೆಗೆ ಕಟ್ಟಡ (20*50) ನಿರ್ಮಾಣ ಮಾಡಲು ಸಾಮಾನ್ಯ ವರ್ಗದವರಿಗೆ ₹3ಲಕ್ಷ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ₹3.60ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕ ಪ್ರಶಾಂತ್‌, ಗ್ರಂಥಾಲಯ ಡಿಜಿಟಲೀಕರಣ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಸ್ಪರ್ಧಾತ್ಮಕ ‍ಪರೀಕ್ಷೆಗಳಿಗೆ ತಯಾರು ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೆಳಿಗ್ಗೆ 9ರಿಂದ 11, ಸಂಜೆ 4ರಿಂದ 6 ಗಂಟೆ ಅವಧಿಯಲ್ಲಿ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳನ್ನು ಉಪಯೋಗಿಸಿಕೊಳ್ಳಬಹುದು ಎಂದರು.

‌‌ಗ್ರಾಮ ಪಂಚಾಯಿತಿ ಅಧ್ಯಕ್ಷ ಮರವೆ ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು, ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರಾಘವೇಂದ್ರ, ಗ್ರಾಮಸ್ಥರಾದ ಸೈಯದ್ ಶಬ್ಬಿರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT