ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಇಎ ವಿಶ್ವದಲ್ಲಿಯೇ ಅತ್ಯುತ್ತಮ ವಿಮಾನ ನಿಲ್ದಾಣ

Published 14 ಮಾರ್ಚ್ 2024, 14:31 IST
Last Updated 14 ಮಾರ್ಚ್ 2024, 14:31 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಏರ್‌ಪೋರ್ಟ್ ಕೌನ್ಸಿಲ್ ಇಂಟರ್ ನ್ಯಾಷನಲ್‌(ಎಸಿಐ) ನೀಡುವ ‘ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿಗೆ ಸತತ 2ನೇ ವರ್ಷವೂ ಆಯ್ಕೆಯಾಗಿದೆ.

ಬೆಂಗಳೂರಿಗೆ ತಡೆರಹಿತ ಸಂಚಾರ ಅನುಭವ, ಮೆಟ್ರೊ ಅಲ್ಲದ ನಗರಗಳಿಗೆ ಸಂಪರ್ಕ ಮತ್ತು ದಕ್ಷಿಣ ಭಾರತದಾದ್ಯಂತ ಸುಗಮ ಸಂಪರ್ಕ ಒದಗಿಸುತ್ತಿರುವ ಕಾರಣಕ್ಕೆ ಪ್ರಶಸ್ತಿಗೆ ಭಾಜನವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ವಿಮಾನ ನಿಲ್ದಾಣದ‌‌ ವ್ಯವಸ್ಥಾಪಕ ನಿರ್ದೇಶಕ ಸಿಇಒ ಹರಿಮರಾರ್, ಎಸಿಐನಿಂದ ಈ ಗೌರವ ಪಡೆದಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

ಎಸಿಐ ವರ್ಲ್ಡ್ ಮಹಾನಿರ್ದೇಶಕ ಲೂಯಿಸ್ ಫೆಲಿಪ್ ಡಿ ಒಲಿವೇರಾ, ಕೆಂಪೇಗೌಡ ವಿಮಾನ ನಿಲ್ದಾಣದ ಸಾಧನೆಯನ್ನು ಶ್ಲಾಘಿಸಿದ್ದಾರೆ.

ವಿಶ್ವದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅವರ ಅನುಭವದ ಕುರಿತು ನೀಡಲಾಗಿದ್ದ ಸಮೀಕ್ಷೆಯಲ್ಲಿ ಬಹುತೇಖರು ಕೆಂಪೇಗೌಡ ವಿಮಾನ ನಿಲ್ದಾಣದ ಅನುಭವದ ಕುರಿತು ಮಾಹಿತಿ ಹಂಚಿಕೊಂಡಿದ್ದು, ಉತ್ತಮ ವಿಮಾನ ನಿಲ್ದಾಣದ ಆಯ್ಕೆ ನೀಡಿದ್ದರ ಪರಿಣಾಮ 2ನೇ ಬಾರಿ ಈ ಪ್ರಶಸ್ತಿ ಲಭಿಸಿದೆ.

ವಿಶ್ವದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅವರ ಅನುಭವದ ಕುರಿತು ನೀಡಲಾಗಿದ್ದ ಸಮೀಕ್ಷೆಯಲ್ಲಿ ಹೆಚ್ಚಿನ ಪ್ರಯಾಣಿಕರು ಕೆಂಪೇಗೌಡ ವಿಮಾನ ನಿಲ್ದಾಣದ ಅನುಭವದ ಕುರಿತು ಮಾಹಿತಿ ಹಂಚಿಕೊಂಡಿದ್ದು, ಉತ್ತಮ ವಿಮಾನ ನಿಲ್ದಾಣವೆಂದು ಆಯ್ಕೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT