ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಿ: ಜಮೀರ್ ಅಹ್ಮದ್‌ಖಾನ್

ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರ ಆಸೆ ಈಡೇರಿಸಲು ಸಹಕರಿಸಲು ಮನವಿ
Last Updated 13 ಏಪ್ರಿಲ್ 2019, 13:25 IST
ಅಕ್ಷರ ಗಾತ್ರ

ವಿಜಯಪುರ: ‘ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ಹಂಬಲ ಹೊಂದಿಕೊಂಡಿರುವ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಆಸೆಯನ್ನು ಈಡೇರಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ’ ಎಂದು ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್‌ಖಾನ್ ಹೇಳಿದರು.

ಇಲ್ಲಿನ ಶಿವಗಣೇಶ ಸರ್ಕಲ್‌ನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಮೈತ್ರಿ ಅಭ್ಯರ್ಥಿ ಸಂಸದ ವೀರಪ್ಪ ಮೊಯಿಲಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.

‘ಈ ದೇಶದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಬದುಕುತ್ತಿದ್ದಾರೆ. ಇವರೆಲ್ಲರ ಒಗ್ಗಟ್ಟನ್ನು ಮುರಿದು ಜಾತಿಯ ವಿಷಬೀಜ ಬಿತ್ತುವಂತಹ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ಮುಸ್ಲಿಂ ಸಮುದಾಯದವರೂ ಈ ದೇಶದ ವಾರಸುದಾರರು ಎನ್ನುವುದನ್ನು ಮರೆತಿದ್ದಾರೆ’ ಎಂದರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಸರ್ಕಾರ ಮಾಡಿದ್ದ ವೇಳೆ, ಅಧಿಕಾರ ಕೊಡಲಿಲ್ಲ ಎನ್ನುವ ಒಂದೇ ಒಂದು ಕಾರಣಕ್ಕೆ ಜನರು ಬಿಜೆಪಿಗೆ ಅಧಿಕಾರ ಕೊಟ್ಟಿದ್ದರು. ಕೊಟ್ಟಿದ್ದ ಅಧಿಕಾರವನ್ನು ನಿಭಾಯಿಸಲಿಕ್ಕೆ ಸಾಧ್ಯವಾಗದೆ ಜೈಲಿಗೆ ಪರೇಡ್ ಮಾಡಿದರು ಎಂದು ಆರೋಪಿಸಿದರು.

‘ಬಿಜೆಪಿಯವರಿಗೆ ಅಧಿಕಾರ ಮುಖ್ಯವಾಗಿದೆ. ರಾಮಮಂದಿರ ಹೆಸರೇಳಿಕೊಂಡು ರಾಜಕೀಯ ಮಾಡ್ತಾರೆ. ರಾಮ ಮಂದಿರ ಕಟ್ಟಲಿಕ್ಕೆ ನಮ್ಮ ವಿರೋಧವಿಲ್ಲ, ಮಂದಿರ ಕಟ್ಟಲಿಕ್ಕೆ ನಾವೂ ಬರುತ್ತೇವೆ. ಬಾಬರಿ ಮಸೀದಿಯೂ ನಿರ್ಮಾಣವಾಗಲಿ. ಅದನ್ನು ನಾವು ನಿರ್ಮಾಣ ಮಾಡಿಕೊಳ್ಳುತ್ತೇವೆ. ಎಲ್ಲರೂ ಒಗ್ಗಟ್ಟಿನಿಂದ ಬದುಕೋಣ ನಮಗೆ ಗಲಾಟೆ ಬೇಕಾಗಿಲ್ಲ. ಶಾಂತಿ ಬೇಕಾಗಿದೆ’ ಎಂದು ಅವರು ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರ ವಿರೋಧದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚಲುವರಾಯಸ್ವಾಮಿ ಅವರು ಕುಮಾರಸ್ವಾಮಿ ಅವರ ಮೇಲೆ ಸ್ವಲ್ಪ ಕೋಪ ಮಾಡಿಕೊಂಡಿದ್ದಾರೆ ಅಷ್ಟೇ, ಏನೂ ಸಮಸ್ಯೆಯಾಗಲ್ಲ ಎಂದರು.

ಮುಖಂಡರಾದ ಸಿ.ನಾರಾಯಣಸ್ವಾಮಿ, ಕೆ.ವೆಂಕಟಸ್ವಾಮಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ವಿ.ಮಂಜುನಾಥ್, ಜೆಡಿಎಸ್ ರಾಜ್ಯ ಘಟಕದ ಸಂಘಟನಾ ಸಂಚಾಲಕ ಅಶ್ವಥಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಇರಿಗೇನಹಳ್ಳಿ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಚಂದ್ರಪ್ಪ, ಪ್ರಸನ್ನಕುಮಾರ್, ನಗರ ಘಟಕದ ಅಧ್ಯಕ್ಷ ಎಸ್.ಭಾಸ್ಕರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಬಾರಕ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ವಿ.ಎಂ. ನಾಗರಾಜ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಜಾಮೀಯಾ ಮಸೀದಿ ಅಧ್ಯಕ್ಷ ಹನೀಪುಲ್ಲಾ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ದೇವನಹಳ್ಳಿ ಚುನಾವಣಾ ವೀಕ್ಷಕ ಡಿ.ವಿ. ಕೃಷ್ಣಮೂರ್ತಿ, ಮಹಬೂಬ್‌ಪಾಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT