ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಎಸಿಐ (ಏರ್ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಷನಲ್) ಏಷ್ಯಾ-ಪೆಸಿಫಿಕ್ ಮತ್ತು ಮಧ್ಯಪ್ರಾಚ್ಯ ಸುರಕ್ಷತಾ ಮಾನ್ಯತಾ ಪ್ರಶಸ್ತಿ–2026 ಅತ್ಯುನ್ನತ ಗೌರವವಾದ ‘ಡೈಮಂಡ್ ಅವಾರ್ಡ್’ಗೆ ಭಾಜನವಾಗಿದೆ.

ರನ್ವೇ ಸುರಕ್ಷತೆ, ದತ್ತಾಂಶ ಆಧಾರಿತ ಕಾರ್ಯಾಚರಣೆ, ಪಾಲುದಾರರ ಸಹಯೋಗ ಮತ್ತು ನವೀನ ಸುರಕ್ಷತಾ ಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಈ ಪ್ರಶಸ್ತಿ ಲಭಿಸಿದೆ. ಪೈಲಟ್ ಜಾಗೃತಿ ಕಾರ್ಯಕ್ರಮ ಹಾಗೂ ಸುಧಾರಿತ ಎಫ್ಒಡಿ ನಿರ್ವಹಣೆ ವ್ಯವಸ್ಥೆಯು ಈ ಸಾಧನೆಗೆ ಪ್ರಮುಖ ಕಾರಣವಾಗಿದೆ.

‘ಈ ಪ್ರಶಸ್ತಿ ನಮ್ಮ ಸುರಕ್ಷತಾ ಚೌಕಟ್ಟಿನ ಪರಿಪಕ್ವತೆ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾದ ಕಾರ್ಯಾಚರಣೆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ವಿಮಾನ ನಿಲ್ದಾಣದ ಮುಖ್ಯ ಕಾರ್ಯಾಚರಣೆ ಅಧಿಕಾರಿ ಗಿರೀಶ್ ನಾಯರ್ ತಿಳಿಸಿದ್ದಾರೆ.

ವಿಮಾನಯಾನ ಸುರಕ್ಷತೆ ಮತ್ತು ಕಾರ್ಯಾಚರಣೆ ದಕ್ಷತೆಯಲ್ಲಿ ಶ್ರೇಷ್ಠತೆ ಸಾಧಿಸಿರುವುದಕ್ಕೆ ಎಸಿಐ ಏಷ್ಯಾ-ಪೆಸಿಫಿಕ್ ಮತ್ತು ಮಧ್ಯಪ್ರಾಚ್ಯದ ಮಹಾನಿರ್ದೇಶಕ ಸ್ಟೆಫಾನೊ ಬರೋನ್ಸಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-18-1093691558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.