ದೇವನಹಳ್ಳಿ: ಪ್ರಯಾಣಿಕನ ಹೊಟ್ಟೆಯಲ್ಲಿ ಕೊಕೇನ್ ಮಾತ್ರೆ, ಬಂಧನ

ದೇವನಹಳ್ಳಿ: ಹೊಟ್ಟೆಯೊಳಗೆ ಮಾದಕ ವಸ್ತುಗಳನ್ನು ಇಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.
ದುಬೈ ಮಾರ್ಗವಾಗಿ ಆಗಮಿಸಿದ್ದ ಪ್ರಯಾಣಿಕರನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಕೊಕೇನ್ ತುಂಬಿದ್ದ ಮಾತ್ರೆಗಳನ್ನು (ಕ್ಯಾಪ್ಸುಲ್) ನುಂಗಿ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದಿದ್ದಾನೆ.
ಬಂಧಿತನಿಂದ ಒಟ್ಟು 686 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ. ಜತೆಗೆ ಮಾದಕ ವಸ್ತುಗಳ ನಿಯಂತ್ರಣಾ ಕಾಯಿದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.