ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್ಲರೂ ಜತೆಗೂಡಿ ಕೆಂಪೇಗೌಡ ಜಯಂತಿ ಆಚರಣೆ’

Last Updated 20 ಜೂನ್ 2018, 6:37 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕೆಂಪೇಗೌಡ ಜಯಂತಿಯನ್ನು ಯಾವ ರೀತಿ ಆಚರಿಸಬೇಕು ಎನ್ನುವುದನ್ನು ಎಲ್ಲರೂ ಸೇರಿ ನಿರ್ಧರಿಸಬೇಕು. ಪ್ರತ್ಯೇಕವಾಗಿ ಜಯಂತಿ ಆಚರಣೆ ಸರಿಯಲ್ಲ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
ಜೂನ್‌ 27ರಂದು ಕೆಂಪೇಗೌಡ ದಿನಾಚರಣೆ ಸಂಬಂಧ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮಂಗಳವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಸಿದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಜಯಂತಿಯಾಗಲಿ ಸರ್ಕಾರದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲ ಸಮುದಾಯದವರು ಭಾಗವಹಿಸಿವುದು ಒಳಿತು ಎಂದು ಸಲಹೆ ನೀಡಿದರು. ಎಲ್ಲರ ಅಭಿಪ್ರಾಯದ ನಂತರ ಜಯಂತಿ ಆಚರಣೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಬಜೆಟ್‌ ಅಧಿವೇಶನದ ನಂತರ ಪ್ರತಿ ಸೋಮವಾರ ನಗರಸಭೆಯಲ್ಲಿ ಹಾಗೂ ಇನ್ನುಳಿದ ದಿನ ತಾಲ್ಲೂಕು ಪಂಚಾಯಿತಿಯ ಶಾಸಕರ ಕಚೇರಿಯಲ್ಲಿ ಜನರ ಕುಂದು ಕೊರತೆ ಆಲಿಸಿ ಪರಿಹರಿಸಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್‌ ಬಿ.ಎ.ಮೋಹನ್‌ ಮಾತನಾಡಿ, ಸರ್ಕಾರದ ಶಿಷ್ಠಾಚಾರದಂತೆ ಕೆಂಪೇಗೌಡ ಜಯಂತಿಯನ್ನು ತಾಲ್ಲೂಕು ಆಡಳಿತ ಶಾಸಕರ ಹಾಗೂ ಸಭೆಯ ಸೂಚನೆಯಂತೆ ಸ್ಥಳ ನಿಗದಿಪಡಿಸಿ ನಡೆಸಲಾಗುವುದು ಎಂದರು.

ಸಭೆಯಲ್ಲಿ ಮಾತನಾಡಿದ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎನ್‌.ಹನುಮಂತೇಗೌಡ, ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಿಸದೇ ಇದ್ದ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು ಎಂದು ತಿಳಿಸಿದರು.

ಸರ್ಕಾರದ ವತಿಯಿಂದ ನಿಗದಿತ ದಿನಾಂಕ ಗೊತ್ತುಪಡಿಸಿ ಆಚರಣಾ ಸಮಿತಿಯಿಂದಲೇ ಈಗ ಜಯಂತಿಯನ್ನು ಆಚರಿಸಲು ನಿರ್ಧಾರವಾಗಿದೆ ಎಂದರು. ಒಕ್ಕಲಿಗರ ಸಂಘದ ವತಿಯಿಂದ ಪ್ರತ್ಯೇಕವಾಗಿಯೇ ಕೆಂಪೇಗೌಡ ಜಯಂತಿಯನ್ನು ಆಚರಿಸಿ ಸಮುದಾಯದ ಎಲ್ಲ ಪ್ರತಿಭಾಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನಗಳನ್ನು ನಡೆಸಬೇಕೇ ಅಥವಾ ಸರ್ಕಾರದ ವತಿಯಿಂದ ನಡೆಯುವ ಆಚರಣೆಯಲ್ಲಿ ಸೇರಿಕೊಂಡು ಕೆಂಪೇಗೌಡ ಜಯಂತಿಯನ್ನು ಆಚರಿಸಬೇಕು ಎನ್ನುವ ಬಗ್ಗೆ ಜೂನ್‌ 21 ರಂದು ನಗರದ ಪಿಎಲ್‌ಡಿ ಬ್ಯಾಂಕ್‌ ಆವರಣದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಗುವುದು ಎಂದರು.

ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಕೆಂಪೇಗೌಡ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಆಚರಿಸಲು ಸರ್ಕಾರ ಮುಂದಾಗಿರುವುದನ್ನು ಸ್ವಾಗತಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಶ್ರೀವತ್ಸ, ನಗರಸಭೆ ಅಧ್ಯಕ್ಷ ಟಿ.ಎನ್‌.ಪ್ರಭುದೇವ್‌, ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್‌, ಮುಖಂಡರಾದ ಸಿ.ಡಿ.ಸತ್ಯನಾರಾಯಣಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ರಂಗಪ್ಪ, ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಜಯಪಾಲ್, ನಗರಸಭೆ ಪೌರಾಯುಕ್ತ ಆರ್‌.ಮಂಜುನಾಥ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT