ಮಂಗಳವಾರ, ಜೂನ್ 28, 2022
23 °C

ಕಗ್ಗಲೀಪುರ ಗ್ರಾಪಂ: ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಂಗೇರಿ: ಕಗ್ಗಲೀಪುರಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಭಾನುವಾರ ನಡೆಯಿತು. ಪಕ್ಷ ಬೆಂಬಲಿತ 27 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

38 ಸದಸ್ಯ ಬಲದ ಕಗ್ಗಲೀಪುರ ಗ್ರಾಮ ಪಂಚಾಯಿತಿಗೆ ಇದೇ 20ರಂದು ಚುನಾವಣೆ ನಡೆದಿತ್ತು. 95 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದರು. ಕೆಂಗೇರಿಯಲ್ಲಿರುವ ಕೆಂಗೇರಿ ಎಜುಕೇಷನ್‍ ಟ್ರಸ್ಟ್ ಶಾಲಾ ಆವರಣದಲ್ಲಿ ಭಾನುವಾರ ಮತ ಎಣಿಕೆ ನಡೆಯಿತು. 

ಕಗ್ಗಲೀಪುರ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ, ಕಗ್ಗಲೀಪುರ 5ನೇ ಬ್ಲಾಕ್‍ ಅಭ್ಯರ್ಥಿಯಾಗಿ ಜಯಗಳಿಸಿದ ಫರ್ವಿಜ್ ಅವರು, ‘ಸ್ಥಳೀಯ ಮುಖಂಡರು, ಜನರ ಬೆಂಬಲದಿಂದ ಗೆಲುವು ಸಾಧ್ಯವಾಯಿತು. ಜನರ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುತ್ತೇವೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು