ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಳ ಉಡುಪಿನಲ್ಲಿ ಕೊಕೇನ್ ಕಳ್ಳ ಸಾಗಣೆ: ಕೀನ್ಯಾ ಮೂಲದ ಮಹಿಳೆ ಬಂಧನ

Published 13 ಸೆಪ್ಟೆಂಬರ್ 2023, 23:30 IST
Last Updated 13 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ಸೋಮವಾರ 1.2ಕೆ.ಜಿ ಕೊಕೇನ್ ಕಳ್ಳ ಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ವಿಮಾನ ನಿಲ್ದಾಣದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.

ಕೀನ್ಯಾ ಮೂಲದ ಅಜೆಂಗ್ ಓ ಕ್ಯಾರೋಲಿನ್ ಅಗೋಲಾ ಬಂಧಿತ ಆರೋಪಿ. ಮಹಿಳೆಯು ಒಳ ಉಡುಪಿನಲ್ಲಿ ಕ್ಯಾಪ್ಸುಲ್‌ ಮಾದರಿಯಲ್ಲಿ ಕೊಕೇನ್‌ ಮಾದಕ ವಸ್ತುವನ್ನು ಕಳ್ಳ ಸಾಗಣೆ ಮಾಡಲು ಯತ್ನಿಸಿದ್ದರು. ಅವರಿಂದ ವಶಕ್ಕೆ ಪಡೆದ ಮಾದಕ ವಸ್ತುವಿನ ಮೌಲ್ಯ ₹12 ಕೋಟಿ ಎಂದು ಅಂದಾಜಿಸಲಾಗಿದೆ.

ಆರೋಪಿ ಮಹಿಳೆ ಇಥಿಯೋಪಿಯನ್ ಏರ್‌ಲೈನ್ಸ್ ಮೂಲಕ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT