ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ | ಮಗು ಅಪಹರಣ: ಬಾಂಬೆ ಮಿಠಾಯಿವಾಲಾ ಬಂಧನ

Published 28 ಏಪ್ರಿಲ್ 2024, 5:49 IST
Last Updated 28 ಏಪ್ರಿಲ್ 2024, 5:49 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನನ್ನು ಅಪಹರಿಸಿದ ಆರೋಪ ಮೇಲೆ ಉತ್ತರ ಪ್ರದೇಶದ ಬಾಂಬೆ ಮಿಠಾಯಿ (ಕಾಟನ್‌ ಕ್ಯಾಂಡಿ) ಮಾರಾಟಗಾರನನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಉತ್ತರ ಪ್ರದೇಶದ ಗಜೇಂದ್ರ ಬಂಧಿತ ಆರೋಪಿ. ಬಾಂಬೆ ಮಿಠಾಯಿ ಮಾರಾಟ ಮಾಡುವ ನೆಪದಲ್ಲಿ ತಾವರೆಕೆರೆಯ ಸರ್ಕಾರಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಬಳಿ ತೆರಳಿದ್ದ ಗಜೇಂದ್ರ, ಬಾಲಕನೊಬ್ಬನನ್ನು ಎಳೆದುಕೊಂಡು ಹೊರಟಿದ್ದ.

ಬಾಲಕನ ಕಿರಚಾಟ ಕೇಳಿದ ಗ್ರಾಮಸ್ಥರು ವ್ಯಕ್ತಿಯನ್ನು ಹಿಡಿದು ವಿಚಾರಿಸಿದಾಗ ಅಪಹರಣ ಬೆಳಕಿಗೆ ಬಂದಿದೆ. ಕೂಡಲೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ನಂದಗುಡಿ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT