ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಕೋವಿಡ್‌ ಆಸ್ಪತ್ರೆ

ಗ್ರೀನ್ ಕೋ ಸಂಸ್ಥೆಯಿಂದ 200 ಆಮ್ಲಜನಕ ಸಾಂದ್ರಕ ವಿತರಣೆ
Last Updated 20 ಮೇ 2021, 3:45 IST
ಅಕ್ಷರ ಗಾತ್ರ

ದೇವನಹಳ್ಳಿ/ವಿಜಯಪುರ: ರಾಜ್ಯದಲ್ಲಿ ಕೋವಿಡ್ ಅಲೆಯನ್ನು ತಗ್ಗಿಸಲು ಸರ್ಕಾರ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಲಾಕ್‌ಡೌನ್‌ನಿಂದಾಗಿ ಸ್ವಲ್ಪಮಟ್ಟಿಗೆ ಕೋವಿಡ್ ಸೋಂಕು ಪ್ರಕರಣದಲ್ಲಿ ಇಳಿಕೆ ಕಂಡು ಬಂದಿದೆ. ಇದೇ 24ರ ನಂತರ ಲಾಕ್‌ಡೌನ್ ವಿಸ್ತರಣೆ ಮಾಡುವ ಕುರಿತು ಚಿಂತನೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಿರುವ 150 ಹಾಸಿಗೆಗಳ ಸೌಲಭ್ಯವುಳ್ಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಗ್ರೀನ್ ಕೋ ಸಂಸ್ಥೆಯಿಂದ ನೀಡಿದ 200 ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಸ್ವೀಕರಿಸಿ ಮಾತನಾಡಿದರು.

ಕೋವಿಡ್ ನಿಯಂತ್ರಣಕ್ಕಾಗಿ ಜನರು ಸಹಕಾರ ನೀಡಬೇಕು. ಈಗಾಗಲೇ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು ಅದನ್ನು ಜನರು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಗ್ರೀನ್ ಕೋ ಸಂಸ್ಥೆಯಿಂದ ಸರ್ಕಾರಿ ಆಸ್ಪತ್ರೆಗಳಿಗೆ 200 ಆಮ್ಲಜನಕ ಸಾಂದ್ರಕ ಯಂತ್ರ ನೀಡಿರುವುದು ಶ್ಲಾಘನೀಯ. ನೂರಾರು ಜೀವ ಉಳಿಸಲು ಸಹಕಾರಿ ಎಂದು ಯಡಿಯೂರಪ್ಪ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಹರಿಮರಾರ್, ಗ್ರೀನ್ ಕೋ ಗ್ರೂಪ್‌ನ ಸಂಸ್ಥಾಪಕ ಅನಿಲ್ ಚಲಮಲಶೆಟ್ಟಿ, ಮಹೇಶ್ ಕೊಹ್ಲಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ರವಿಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT