ಶುಕ್ರವಾರ, ಮೇ 20, 2022
25 °C

ತಪ್ಪಿದ ಲೆಕ್ಕಾಚಾರ, 3 ಕ್ಷೇತ್ರಗಳಲ್ಲಿ ಸೋಲು: ಡಿ.ಕೆ.ಶಿವಕುಮಾರ್ ಅಭಿಪ್ರಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ‘ವಿಧಾನ ಪರಿಷತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಎರಡಂಕಿ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ. ಅದರಂತೆ 11 ಸ್ಥಾನ ಗೆದ್ದಿದ್ದೇವೆ. ಇನ್ನೂ ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇತ್ತು. ನಮ್ಮ ಲೆಕ್ಕಾಚಾರ ತಪ್ಪಿದ್ದರಿಂದ ಅವುಗಳನ್ನು ಕಳೆದುಕೊಂಡೆವು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್‌ ಚುನಾವಣೆ ಫಲಿತಾಂಶದ ಬಗ್ಗೆ ವಿಶ್ಲೇಷಿಸಿದರು.

‘ಕಡಿಮೆ ಮತಗಳ ಅಂತರದಿಂದ ಕಲಬುರಗಿ, ಚಿಕ್ಕಮಗಳೂರು ಮತ್ತು ಕೊಡಗು ಕ್ಷೇತ್ರಗಳನ್ನು ಕಳೆದುಕೊಂಡೆವು.12 ರಿಂದ 13 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು.  ಹಳೇ ಮೈಸೂರು ಭಾಗದ ಫಲಿತಾಂಶದ ಬಗ್ಗೆ ವಿಶ್ಲೇ‌ಷಿಸುವುದು ಬೇಡ‌. ಮಂಡ್ಯದಲ್ಲಿ ಎಲ್ಲ ಪಕ್ಷದವರೂ ಸಹಾಯ ಮಾಡಿದ್ದಾರೆ’ ಎಂದರು.

*

ಫಲಿತಾಂಶ ಸಮಾಧಾನ ತಂದಿದೆ. ರಾಜ್ಯದ ಜನರು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿ. ಈ  ಫಲಿತಾಂಶ ಪರೋಕ್ಷವಾಗಿ ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಿದೆ. 
–ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು