ಶನಿವಾರ, ಫೆಬ್ರವರಿ 27, 2021
30 °C
ವಿವಿಧ ಕ್ಷೇತ್ರಗಳ ಸಾಧಕರಿಗೆ ಅಭಿನಂದನೆ

ಮಹಾತ್ಮರ ಆಶಯ ಸಕಾರಗೊಳ್ಳಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು, ಸಂವಿಧಾನ ರಚಿಸಿ ಸಮಾಜದ ಸರ್ವತೋಮುಖ ಅಭಿ ವೃದ್ಧಿಗೆ ಮಾರ್ಗತೋರಿದ ಮಹಾತ್ಮರ ಆಶಯಗಳನ್ನು ಸಾಕಾರಗೊಳಿಸಬೇಕಾಗಿದೆ’ ಎಂದು ತಹಶೀಲ್ದಾರ್ ಎಸ್. ಅಜಿತ್ ಕುಮಾರ್ ರೈ ತಿಳಿಸಿದರು.

ಕೆ.ಆರ್.ಪುರದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಪ್ರಚಾರ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಿವಿಧ ಕ್ಷೇತ್ರಗಳ ಸಾಧಕರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

ಬಿಬಿಎಂಪಿ ಮಹದೇವಪುರ ವಲಯ ಜಂಟಿ ಆಯುಕ್ತ ವೆಂಕಟಾಚಲಪತಿ, ದಕ್ಷಿಣ ವಲಯದ ಶಿಕ್ಷಣ ಅಧಿಕಾರಿ ಹನುಮಂತಯ್ಯ, ತಾಲ್ಲೂಕು ಪಂಚಾ ಯಿತಿ ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥ್, ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷೆ ಎಂ.ಮಂಜುಳಾ, ಮುಖಂ ಡರಾದ ಅಂತೋಣಿಸ್ವಾಮಿ, ಸಾಹುಕಾರ್ ಗಿರಿ, ಶಿವಪ್ಪ, ಕೃಷ್ಣ ಇದ್ದರು.

ಕಾಲೇಜು ಆವರಣದ ಬಳಿ ಆಶಾ ಕಾರ್ಯಕರ್ತೆಯರು ಕೊರೊನಾ ನಿಯಂತ್ರಣಕ್ಕಾಗಿ ಸ್ಯಾನಿಟೈಸರ್ ಬಳಸಿ ಕೈತೊಳೆಯುವ ಬಗ್ಗೆ ಹಾಗೂ ಸದಾ ಮಾಸ್ಕ್ ಬಳಸುವಂತೆ ಜಾಗೃತಿ ಮೂಡಿಸಿದರು. ವೇದಿಕೆಯಲ್ಲಿದ್ದ ಕೆಲವು ಗಣ್ಯರು ಮಾಸ್ಕ್‌ ಧರಿಸಿರಲಿಲ್ಲ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು