ಸೋಮವಾರ, ಆಗಸ್ಟ್ 8, 2022
21 °C

ಪ್ರಯಾಣಿಕರಿಗಾಗಿ ಕಾದ ಬಸ್‌ಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ನಡೆಸುತಿದ್ದ ಮುಷ್ಕರ ಹೈಕೋರ್ಟ್ ನಿರ್ದೇಶನದಂತೆ ತಾತ್ಕಾಲಿಕವಾಗಿ ಅಂತ್ಯಗೊಂಡಿತು.

ಬುಧವಾರ ನಗರದಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ವಿವಿಧ ಕಡೆಗಳಿಗೆ ತೆರಳುವ ಹತ್ತುಕ್ಕೂ ಹೆಚ್ಚು ಬಸ್‌ಗಳು ಪ್ರಯಾಣಿಕರಿಗಾಗಿ ಕಾದು ನಿಂತಿದ್ದವು. ಶೇ 50ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳು ರಸ್ತೆಗಿಳಿದಿದ್ದು, ಗುರುವಾರದಿಂದ ಬೆಳಿಗ್ಗೆಯಿಂದ ಬಸ್ ಸಂಚಾರ ಯಥಾಸ್ಥಿತಿಗೆ ಬರುವ ನಿರೀಕ್ಷೆ ಎಂದು ಡಿಪೊ ಅಧಿಕಾರಿಗಳು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರದಿಂದ ತಿರುಪತಿ, ಬೆಂಗಳೂರು, ಗೌರಿಬಿದನೂರು, ಚಿಕ್ಕಬಳ್ಳಾಪುರ, ದೇವನಹಳ್ಳಿ, ತುಮಕೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ನಲವತ್ತು ಬಸ್ಸು ಸಂಚಾರ ಆರಂಭಿಸಿವೆ ಎಂದು ಡಿಪೊ ವ್ಯವಸ್ಥಾಪಕ ಆನಂದ್ ತಿಳಿಸಿದ್ದಾರೆ. ಆದರೆ
ಬುಧವಾರ ಪ್ರಯಾಣಿಕರ ಕೊರತೆಯಿಂದ ಬಸ್‌ಗಳು ಕಾದು ನಿಂತಿದ್ದ ದೃಶ್ಯ ಕಂಡು ಬಂತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು