ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ವರ್ಷ ಸಮ್ಮಿಶ್ರ ಸರ್ಕಾರ ಸುಭದ್ರ: ಖಂಡ್ರೆ

Last Updated 2 ಅಕ್ಟೋಬರ್ 2018, 14:08 IST
ಅಕ್ಷರ ಗಾತ್ರ

ವಿಜಯಪುರ: ಮುಂದಿನ ಐದು ವರ್ಷಗಳ ಕಾಲ ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಬಿ ಖಂಡ್ರೆ ಹೇಳಿದರು.

ಇಲ್ಲಿನ ಪ್ರವಾಸಿಮಂದಿರಲ್ಲಿ ಮಂಗಳವಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಧಿಕಾರ ದಾಹದಿಂದ ಮೈತ್ರಿ ಸರ್ಕಾರವನ್ನು ಕೆಡವಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅವರ ಯಾವ ಪ್ರಯತ್ನಗಳು ಸಫಲವಾಗುವುದಿಲ್ಲ ಎಂದರು.

ಸಂಪುಟಕ್ಕೆ ಸೇರ್ಪಡೆಗೊಳ್ಳಲು ಸಾಕಷ್ಟು ಮಂದಿಯಿದ್ದಾರೆ. ಹೇಗೆ ಸಂಬಾಳಿಸ್ತೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ ನಿಜ. ಆದರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಉದ್ಯೋಗಗಳನ್ನು ಸೃಷ್ಟಿ ಮಾಡಲಿಲ್ಲ, ಬಂಡವಾಳಶಾಹಿಗಳು ಸಾವಿರಾರು ಕೋಟಿಗಳನ್ನು ದೋಚಿಕೊಂಡು ದೇಶ ಬಿಟ್ಟು ಹೋದರು. ದೇಶದ ಇತಿಹಾಸದಲ್ಲಿ ರಫೇಲ್ ಶಸ್ತ್ರಾಸ್ತ್ರ ಖರೀದಿ ದೊಡ್ಡ ಹಗರಣವಾಗಿದೆ, ಕೋಮು ಭಾವನೆ ಕೆರಳಿಸುವ ಕೆಲಸಗಳು ನಡೆಯುತ್ತಿವೆ ಎಂದರು.

ನೋಟ್ ರದ್ದತಿ ಮಾಡಿ, ಬಡವರ ಪಾಲಿಗೆ ವಿಲನ್ ಗಳಾಗಿದ್ದಾರೆ. ಕಪ್ಪು ಹಣ ದೇಶಕ್ಕೆ ವಾಪಸ್‌ ಬರಲಿಲ್ಲ, ಇವರ ದುರಾಡಳಿತದಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ ಎಂದು ವ್ಯಂಗ್ಯವಾಡಿದರು.

ಹಣಕಾಸು ಇಲಾಖೆಯಿಂದ ಯಾವುದೇ ಸುಧಾರಿತ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಇವೆಲ್ಲಾ ಬೆಳವಣಿಗೆಗಳಿಂದ ಜನರು ಬೇಸತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಂಡು ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾಗಲಿದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು , ಎಂ.ವೀರಪ್ಪ ಮೊಯಿಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಉತ್ತಮ ಆಡಳಿತ ಕೊಟ್ಟಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿಯೂ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರೊಬ್ಬ ಉತ್ತಮ ನಾಯಕರು ಎಂದಷ್ಟೆ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಲು ಕಾರಣವೇನು ಎನ್ನುವ ಪ್ರಶ್ನೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಉತ್ತಮ ಯೋಜನೆಗಳನ್ನು ಕೊಟ್ಟಿದ್ದೇವೆ. ಜನರಿಗೆ ಮುಟ್ಟಿಸುವಲ್ಲಿ ವಿಫಲವಾಗಿದ್ದೇವೆ ಎಂದರು.

ವಿರೋಧಿಗಳು ಮಾಡಿದ ಅಪಪ್ರಚಾರದಿಂದ ಬಹುಮತ ಬಂದಿಲ್ಲ. ಮೈತ್ರಿ ಸರ್ಕಾರ ರಚನೆ ಮಾಡುವ ಅನಿವಾರ್ಯವಿತ್ತು ಮಾಡಿದ್ದೇವೆ. ಲೋಕಸಭೆಯಲ್ಲಿ ಗೆದ್ದು ಬರ್ತೇವೆ ಎಂದರು.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಷ್ಠಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷ ಎಲ್ಲ ಜಾತಿ, ಭಾಷೆ ಜನಾಂಗದವರಿಗೆ ಸಾಮಾಜಿಕ ನ್ಯಾಯವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡುತ್ತಿದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಭಾಳು ಎನ್ನುವ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಲ್ಲರಿಗೂ ನ್ಯಾಯಕೊಡುತ್ತೇವೆ ಎಂದರು.

ಕೆ.ಪಿ.ಸಿ.ಸಿ.ಕಾರ್ಯದರ್ಶಿ ವಿ.ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಪುರಸಭಾ ಸದಸ್ಯ ಎಂ.ಸತೀಶ್ ಕುಮಾರ್, ಮುನಿಕೃಷ್ಣಪ್ಪ, ಅಪ್ಜಲ್ ಪಾಷ, ಧರ್ಮಪುರ ಶಿವಕುಮಾರ್, ಚಿಕ್ಕತತ್ತಮಂಗಲ ಚಿನ್ನಪ್ಪ, ರಮೇಶ್, ಪುರಸಭಾ ಸದಸ್ಯರಾದ ಮಹೇಶ್ ಕುಮಾರ್, ಮುನಿಚಿನ್ನಪ್ಪ, ಮುಖಂಡ ತಿರುಮಲೇಶ್, ಮಹಬೂಬ್ ಪಾಷ, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT