ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಹಣ ದುರ್ಬಳಕೆ ಆರೋಪ: ಕುಂದಾಣ ಪಿಡಿಒ ಅಮಾನತು

Published 30 ನವೆಂಬರ್ 2023, 7:31 IST
Last Updated 30 ನವೆಂಬರ್ 2023, 7:31 IST
ಅಕ್ಷರ ಗಾತ್ರ

ದೇವನಹಳ್ಳಿ: ಸರ್ಕಾರದ ಹಣ ದುರುಪಯೋಗ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂದಾಣ ಗ್ರಾಮ ಪಂಚಾಯಿತಿಯ ಪಿಡಿಒ ಪದ್ಮನಾಭ್ ಅವರನ್ನು ಪಂಚಾಯತ್ ರಾಜ್ ಆಯುಕ್ತಾಲಯ ಆದೇಶದಂತೆ ಜಿ.ಪಂ ಸಿಇಒ ಪಿಡಿಒ ಹುದ್ದೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ನೆಲಮಂಗಲ‌ ತಾಲ್ಲೂಕು ಸೇರಿದಂತೆ‌ ಬೂದಿಹಾಳ್ ಗ್ರಾ.ಪಂ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಕುಂದಾಣ ಪಂಚಾಯಿತಿಯಲ್ಲಿ ಪಿಡಿಒ ಆಗಿದ್ದರು. ತಾಲೂಕಿನ ಬೂದಿಹಾಳ್ ಗ್ರಾಮ ಪಂಚಾಯಿತಿ ನೂತನ ಗ್ರಾಮಸೌಧ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿ ಸರ್ಕಾರದ ಹಣ ದುರ್ಬಳಕೆ ಮಾಡಿದ್ದಾರೆಂದು ಆರೋಪಿಸಿ ಸಾಮಾಜಿ‌ಕ ಹೋರಾಟಗಾರ ಟಿ.ಜಿ.ಗಂಗಾಧರ್ ಎಂಬುವವರು ಸರ್ಕಾರ ಹಾಗೂ ಸಕ್ಷಮ ಶಿಸ್ತು ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರು.

ತನಿಖೆ ನಡೆಸಿದ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಸರ್ಕಾರದ ಹಣ ದುರುಪಯೋಗ ಆಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆ ಪದ್ಮನಾಬ್ ಪಿಡಿಒ ಹುದ್ದೆಯಿಂದ ಅಮಾನತುಪಡಿಸಿ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT