ಘಟನೆಯಲ್ಲಿ ಮೃತ ವ್ಯಕ್ತಿಯನ್ನು ಗೋವಿಂದಪ್ಪ(55) ಎಂದು ಗುರುತಿಸಲಾಗಿದೆ.
ಗ್ರಾಮದ ಮಂಜುನಾಥ್ ಮತ್ತು ಗೋವಿಂದಪ್ಪ ನಡುವೆ ಜಮೀನು ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಘಟನೆ ವಿಕೋಪಕ್ಕೆ ತಿರುಗಿ ಮಂಜುನಾಥ್, ಗೋವಿಂದಪ್ಪನ ಮೇಲೆ ಕಬ್ಬಿಣದ ರಾಡ್‌ನಿಂದ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗಂಭೀರವಾಗಿ ಹಲ್ಲೆಗೆ ಒಳಗಾದ ಗೋವಿಂದಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.