ಆನೇಕಲ್: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಕಾಮಗಾರಿ ಸ್ಥಳದಲ್ಲಿ ಭೂಕುಸಿತದಿಂದಾಗಿ ಐದಾರು ಕಿ.ಮೀ.ಗೂ ಹೆಚ್ಚು ದೂರ ಸಂಚಾರ ದಟ್ಟಣೆ ಉಂಟಾಗಿತ್ತು. ವಾಹನ ಸವಾರರು ನಿಂತಲ್ಲೇ ತಾಸುಗಟ್ಟಲೇ ನಿಲ್ಲಬೇಕಾಯಿತು.

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಚಂದಾಪುರ-ಅತ್ತಿಬೆಲೆ ರಸ್ತೆಯಲ್ಲಿ ಮೂರು ಅಂಡರ್ಪಾಸ್ ಕಾಮಗಾರಿ ನಡೆಯುತ್ತಿದೆ. ಕಳೆದ ಏಳೆಂಟು ತಿಂಗಳಿನಿಂದ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿದೆ.

ಹೆದ್ದಾರಿಗೆ ಹೊಂದಿಕೊಂಡಿರುವ ಹಳೆ ಚಂದಾಪುರದ ಬಳಿ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕಿಲೋ ಮೀಟರ್ಗಟ್ಟಲೇ ವಾಹನಗಳ ಉದ್ದನೆಯ ಸಾಲು ಕಂಡು ಬಂತು. ನೂರಾರು ವಾಹನಗಳ ಹಾರ್ನ್ ಶಬ್ದ ಕಿವಿಗಡಚಿಕ್ಕುವಂತಿತ್ತು. ವಾಹನ ದಟ್ಟಣೆ ನಿಭಾಯಿಸಲು ಪೊಲೀಸರು ಪರದಾಡಿದರು.

ಅಂಡರ್ಪಾಸ್ ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರು ಪ್ರತಿದಿನ ನರಕಯಾತನೆ ಅನುಭವಿಸುವಂತಾಗಿದೆ. ಚಂದಾಪುರ-ಅತ್ತಿಬೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಎರಡು ಮೂರು ತಾಸು ಬೇಕಾಗುತ್ತದೆ.

ಹೆದ್ದಾರಿ ವ್ಯಾಪ್ತಿಯಲ್ಲಿ ಹಲವಾರು ಶಾಲೆ, ಕಾಲೇಜುಗಳಿವೆ. ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳು ಪ್ರತಿನಿತ್ಯ ತಡವಾಗಿ ಹೋಗುತ್ತಿದ್ದಾರೆ. ಶಾಲಾ ವಾಹನಗಳು ಹೆದ್ದಾರಿಯ ವಾಹನ ದಟ್ಟಣೆಯಲ್ಲಿ ಸಿಲುಕಿಕೊಂಡು ಪರದಾಡುವಂತಾಗಿದೆ.

ಅಂಡರ್ಪಾಸ್ ನಿರ್ಮಾಣದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಸಂಚರಿಸುವುದೇ ಒಂದು ದೊಡ್ಡ ಸವಾಲಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ 44ರಲ್ಲಿನ ರಸ್ತೆ ದಟ್ಟಣೆ ಸಮಸ್ಯೆ ನಿವಾರಣೆಗೆ ಗಮನ ವಹಿಸುವ ಅವಶ್ಯಕತೆಯಿದೆ ಎನ್ನುತ್ತಾರೆ ಸಾರ್ವಜನಿಕರು.

ಹೆದ್ದಾರಿ ಪ್ರಾಧಿಕಾರ ಮತ್ತು ಬಿಇಟಿಪಿಎಲ್ನಿಂದ ದಾರಿಬಾಲ್ ಎಂಬ ಕಂಪನಿಯು ಅಂಡರ್ಪಾಸ್ ನಿರ್ಮಾಣದ ಕಾಮಗಾರಿಯ ಗುತ್ತಿಗೆ ಪಡೆದಿದ್ದು, ಕಾಮಗಾರಿಯ ಹೆಸರಿನಲ್ಲಿ ಅಲ್ಲಲ್ಲಿ ಹಳ್ಳಗಳನ್ನು ತೋಡಿದೆ. ಆಮೆಗತಿಯಲ್ಲಿ ಕಾಮಗಾರಿ ಸಾಗುತ್ತಿರುವುದರಿಂದ ಸಾರ್ವಜನಿಕರು ಹಿಡಿಶಾಪ ಹಾಕುತ್ತಾ ಈ ರಸ್ತೆಯಲ್ಲಿ ಸಂಚರಿಸಬೇಕಾಗಿದೆ.

ಗುತ್ತಿಗೆದಾರರ ನಿರ್ಲಕ್ಷ್ಯ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಅಂಡರ್ಪಾಸ್ ನಿರ್ಮಿಸಲು ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಮಂದಗತಿಯ ಕಾಮಗಾರಿಯಿಂದಾಗಿ ಪರದಾಡುವಂತಾಗಿದೆ. ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾದಾಗ ಮಾತ್ರ ಬಂದು ಪರಿಶೀಲಿಸುತ್ತಾರೆ. ನಂತರ ಇತ್ತ ತಲೆ ಹಾಕುವುದಿಲ್ಲ. ಹಾಗಾಗಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಳಜಿ ವಹಿಸಿ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗ ಪರಿಹಾರ ನೀಡಬೇಕು ಎಂದು ಚಂದಾಪುರದ ನಿವಾಸಿ ವಸಂತ್ ಒತ್ತಾಯಿಸಿದ್ದಾರೆ.

ಪೊಲೀಸರಿಗೆ ಸವಾಲು: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಿಂದ ನಿತ್ಯ ಉಂಟಾಗುವ ವಾಹನ ದಟ್ಟಣೆ ನಿವಾರಣೆಗೆ ಪೊಲೀಸರು ಸಾಹಸ ಮಾಡುತ್ತಿದ್ದಾರೆ. ಚಂದಾಪುರ ಸೂರ್ಯಸಿಟಿ, ಅತ್ತಿಬೆಲೆ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ನಿಭಾಯಿಸುವುದು ಕಷ್ಟವಾಗಿದೆ. ಹೆದ್ದಾರಿ ವ್ಯಾಪ್ತಿಯ ಒಂದೆಡೆ ದಟ್ಟಣೆ ಸಂಭವಿಸಿದರೆ ಕನಿಷ್ಠ 7-8 ಕಿ.ಮೀ ವರೆಗೂ ವಾಹನಗಳ ಸಾಲು ಕಂಡು ಬರುತ್ತಿದೆ.

ಒಂದು ತಾಸು ಸಿಲುಕಿದ ಆಂಬುಲೆನ್ಸ್

ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಹಲವಾರು ಪ್ರತಿಷ್ಠಿತ ಆಸ್ಪತ್ರೆಗಳಿವೆ. ತಮಿಳುನಾಡಿನ ಹೊಸೂರಿಗೂ ಇದೇ ರಸ್ತೆಯನ್ನು ಬಳಸಲಾಗುತ್ತದೆ. ಅವೈಜ್ಞಾನಿಕ ಮತ್ತು ನಿಗದಿತ ಅವಧಿಯಲ್ಲಿ ಆಗದಿರುವ ಕಾಮಗಾರಿಯಿಂದಾಗಿ ರೋಗಿಗಳು ಪರದಾಡುವಂತಾಗಿದೆ. ಭೂ ಕುಸಿತದಿಂದ ಆಂಬುಲೆನ್ಸ್ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ತಾಸು ಸಿಲುಕಿಕೊಂಡಿತ್ತು. ರೋಗಿಯ ಸಂಬಂಧಿಕರು ಆಂಬುಲೆನ್ಸ್ಗೆ ದಾರಿ ಮಾಡಲು ಪರದಾಡಿದರು.

ಒಳಚರಂಡಿ ನೀರು ಕಾರಣವೇ?

ರಾಷ್ಟ್ರೀಯ ಹೆದ್ದಾರಿ 44ರಲ್ಲಿನ ಹಳೇ ಚಂದಾಪುರದ ಬಳಿ ಚಂದಾಪುರ ಪುರಸಭೆಯ ವ್ಯಾಪ್ತಿಯ ಜಿಪಿಆರ್ ಬಡಾವಣೆ ಬಳಿ ಒಳಚರಂಡಿಯ ನೀರು ರಸ್ತೆಗೆ ಹರಿಯುತ್ತಿದೆ. ಕೊಳಚೆ ನೀರು ಒಂದೆಡೆ ಹರಿದಿದ್ದರಿಂದ ಹೆದ್ದಾರಿಯ ತಳ ಭಾಗ ತೇವಾಂಶಗೊಂಡು ಭೂಕುಸಿತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ತ್ಯಾಜ್ಯ ನೀರು ರಸ್ತೆಗೆ ಹರಿಯದಂತೆ ಕ್ರಮ ವಹಿಸಬೇಕೆಂದು ಸ್ಥಳೀಯ ನಿವಾಸಿ ವೆಂಕಟೇಶ್ ಆಗ್ರಹಿಸಿದ್ದಾರೆ.

ಪರ್ಯಾಯ ರಸ್ತೆ ಬಳಕೆ ಸೂಚನೆ

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಹಾಗಾಗಿ ಪರ್ಯಾಯ ರಸ್ತೆಗಳನ್ನು ಬಳಸಲು ಪೊಲೀಸರು ಸೂಚನೆ ನೀಡಿದ್ದಾರೆ. ಹೊಸೂರು ಅತ್ತಿಬೆಲೆಗೆ ತೆರಳುವವರು ಚಂದಾಪುರ-ಆನೇಕಲ್ ರಸ್ತೆಯ ಮೂಲಕ ತೆರಳಬೇಕು ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.