ಮಂಗಳವಾರ, ಫೆಬ್ರವರಿ 18, 2020
20 °C

ವಕೀಲರ ಮೇಲೆ ಹಲ್ಲೆ ಖಂಡಿಸಿ ಕಲಾಪ ಬಹಿಷ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಬೆಂಗಳೂರಿನ ಕೌಟಂಬಿಕ ನ್ಯಾಯಾಲಯದಲ್ಲಿ ವಕೀಲರಾದ ಮುನಿರೆಡ್ಡಿ ಅವರ ಮೇಲೆ ಕಕ್ಷಿದಾರರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಶುಕ್ರವಾರ ನಗರದ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟಿಸಿದರು.

ಹಿರಿಯ ವಕೀಲರಾದ ಎಂ.ಕೃಷ್ಣಮೂರ್ತಿ, ಬಿ.ಎಸ್‌.ಮಲ್ಲಿಕಾರ್ಜುನ್‌ ಮಾತನಾಡಿ, ನ್ಯಾಯಾಲಯದ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಖಂಡನೀಯ. ವಕೀಲರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ನ್ಯಾಯಾಲಯದಲ್ಲಿ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದರು.

ರಾಜ್ಯ ವಕೀಲರ ಪರಿಷತ್‌ ಕರೆ ನೀಡಿರುವಂತೆ ಶನಿವಾರ ಎಲ್ಲ ವಕೀಲರು ಕೈಗಳಿಗೆ ಕೆಂಪು ಪಟ್ಟಿ ಧರಿಸಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರಾ.ಬೈರೇಗೌಡ ಹಾಗೂ ವಕೀಲರು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು