ಹೊಸಕೋಟೆ: ಪೊಲೀಸರ ಏಕಪಕ್ಷೀಯ ವರ್ತನೆ, ವಕೀಲರ ರಕ್ಷಣೆ, ಅವೈಜ್ಞಾನಿಕ ಬಾರ್ ಕೌನ್ಸಿಲ್ ಪರೀಕ್ಷೆ ರದ್ದು, ಕಿರಿಯ ವಕೀಲರಿಗೆ ಮಾಸಿಕ ₹10 ಸಾವಿರ ಸಹಾಯಧನ ನೀಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗಾಗಿ ಅಖಿಲ ಭಾರತ ವಕೀಲರ ಒಕ್ಕೂಟದಿಂದ ಸಹಿ ಸಂಗ್ರಹ ಆಂದೋಲನ ಮತ್ತು ಪ್ರತಿಭಟನೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ನಗರದ ನ್ಯಾಯಾಲಯ ಸಂಕೀರ್ಣದ ಬಳಿಯಿಂದ ನಗರದ ತಾಲ್ಲೂಕು ಕಚೇರಿಯವರೆಗೆ ಬೈಕ್ ರ್ಯಾಲಿ ನಡೆಸಿ ನಂತರ ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು.

ಜನತೆಗೆ ನ್ಯಾಯ ದೊರಕಿಸಿ ಕೊಡುವ ವಕೀಲರಿಗೆ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರ ಅವುಗಳನ್ನು ಪರಿಹರಿಸಬೇಕಿದೆ. ರಾಜ್ಯದ ಎಲ್ಲಾ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ₹5 ಲಕ್ಷ, ಜಿಲ್ಲಾ ಸಂಘಗಳಿಗೆ ₹10 ಲಕ್ಷ ಅನುದಾನ ಮಂಜೂರು ಮಾಡಬೇಕು ಎಂದರು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಹರೀಂದ್ರ ಒತ್ತಾಯಿಸಿದರು.

ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯ ಒದಗಿಸಬೇಕು. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿ ಸ್ಥಾಪಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯ ಸ್ಥಾಪಿಸಬೇಕು. ನ್ಯಾಯಾಲಯಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ರಾಜ್ಯದ ಎಲ್ಲ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಚೇಂಬರ್ಗಳನ್ನು ಸ್ಥಾಪಿಸಬೇಕು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರಮೇಶ್, ಪದಾಧಿಕಾರಿಗಳಾದ ಕೆ.ಎನ್.ನಾಗರಾಜ್, ರವಿಕುಮಾರ್, ಕೈವಾರ ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.